ಬಂಟ್ವಾಳ

ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರದಲ್ಲಿ ಬಾಲಾಲಯ ಪ್ರತಿಷ್ಠೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಂಟ್ವಾಳ ಕಸಬಾ ಗ್ರಾಮದಲ್ಲಿರುವ ಶ್ರೀ ಮಹಮ್ಮಾಯಿ ಕ್ಷೇತ್ರವನ್ನು ಪುನರ್ ನಿರ್ಮಿಸಲು ಸಂಕಲ್ಪಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಭಾನುವಾರ ಬಾಲಾಲಯ ಪ್ರತಿಷ್ಠೆ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ ನಡೆಯಿತು.

ಜಾಹೀರಾತು

ಬೆಳಿಗ್ಗೆ ವಿವಿಧ ವೈದಿಕ ಕಾರ್ಯಕ್ರಮಗಳು, ನಂತರ ಬೆಳಿಗ್ಗೆ ಗಂಟೆ ೮.೩೨ಕ್ಕೆ ಒದಗುವ ಕುಂಭಲಗ್ನದಲ್ಲಿ ಶ್ರೀ ಮಹಮ್ಮಾಯಿ ದೇವರ ಬಾಲಾಲಯ ಪ್ರತಿಷ್ಠೆ, ಐಕ್ಯಮತ್ಯ ಹೋಮ ಮತ್ತು ೧೦೮ ಕಾಯಿ ಗಣಯಾಗ ನಡೆಯಿತು.

ನಂತರ ನಡೆದ ಧಾರ್ಮಿಕ ಸಭೆಯಲ್ಲಿ  ಕನ್ಯಾಡಿ ನಿತ್ಯಾನಂದನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶ್ರೀರ್ವಚನ ನೀಡಿ ಹಳೆಯ ಸಾನಿಧ್ಯಗಳ ಪುನರ್ ನಿರ್ಮಾಣ ಪುಣ್ಯ ಕಾರ್ಯ. ಇಂತಹ ಸತ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಭಕ್ತಾದಿಗಳ ಮನೋಸಂಕಲ್ಪಗಳು ಸಿದ್ಧಿಯಾಗುತ್ತದೆ. ಮನುಷ್ಯ ಭಕ್ತಿ, ಶ್ರದ್ಧೆ, ಸತ್ ಚಿಂತನೆಯ ಮೂಲಕ ಬದುಕು ನಡೆಸಿದಾಗ ದೇವರ ಅನುಗ್ರಹಕ್ಕೆ ಪಾತ್ರನಾಗುತ್ತಾನೆ. ಅತ್ಯಂತ ಪುರಾತನ ಮತ್ತು ಕಾರಣೀಕದ ಕ್ಷೇತ್ರವಾಗಿರುವ ಕಾರಂಬಡೆಯಲ್ಲಿ ತಾಯಿಯ ದೇಗುಲ ಶೀರ್ಘದಲ್ಲಿ ಪುನರ್ ನಿರ್ಮಾಣಗೊಂಡು ಬ್ರಹ್ಮಕಲಶ ನೆರವೇರುವಲ್ಲಿ ಭಕ್ತಾದಿಗಳ ಶ್ರದ್ಧಾಭಕ್ತಿ ಪೂರ್ವಕವಾದ ಸೇವೆ ಅಗತ್ಯವಾಗಿದೆ ಎಂದರು.

ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ದೀಪ ಪ್ರಜ್ವಲನ ಮಾಡಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ತುಳುನಾಡು ಇಂದು ದೈವದೇವರ ನಾಡಾಗಿ ರೂಪುಗೊಳ್ಳುತ್ತಿದೆ. ಆರಾದನಾಲಯಗಳ ಪುನರುತ್ತಾನ ಮೂಲಕ ನಮ್ಮ ಧರ್ಮ, ಸಂಸ್ಕೃತಿ ಉಳಿದು ಬೆಳೆಯುತ್ತದೆ. ಅದಕ್ಕಾಗಿ ಧಾರ್ಮಿಕ ಕಾರ್ಯದಲ್ಲಿ ಸರ್ವರ ಸಹಭಾಗಿತ್ವದ ಅಗತ್ಯವಿದೆ ಎಂದು ಅವರು ಹೇಳಿದರು.

ಪುರೋಹಿತರಾದ ಕೇಶವ ಶಾಂತಿ ನಾಟಿ ಮತ್ತು ಜ್ಯೋತಿಷ್ಯ ವಿದ್ವಾನ್ ಸತೀಶ್ ಪಣಿಕ್ಕರ್  ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ ದಾರ್ಮಿಕ ಪ್ರವಚನ ನೀಡಿದರು.

ಮಾಜಿ ಸಚಿವ ಬಿ.ರಮಾನಾಥ ರೈ, ಉಧ್ಯಮಿ ಸಂತೋಷ್ ಕುಮಾರ್ ಕೊಟ್ಟಿಂಜ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ಯೋಜನಾಧಿಕಾರಿ ಜಯಾನಂದ್, ಪುರಸಭಾ ಸದಸ್ಯರಾದ ವಾಸು ಪೂಜಾರಿ ಲೊರೆಟ್ಟೊ, ದೇವಕಿ, ಮೀನಾಕ್ಷಿ ಮೊದಲಾದವರು ಅತಿಥಿಗಳಾಗಿ ಭಾಗವಹಿಸಿದರು.

ಆಡಳಿತ ಮೊಕ್ತೆಸರ ಅರುಣ್ ಕುಮಾರ್ , ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಜಯಶಂಕರ ಕಾನ್ಸಾಲೆ, ಪ್ರತಿಷ್ಠಾನದ ಅಧ್ಯಕ್ಷ ಕೊರಗಪ್ಪ ಕೊಲಂಬೆಬೈಲು , ಕೋಶಾಧಿಕಾರಿ ಕೇಶವ ಪಾಲಡ್ಕ, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜೀರ್ಣೋದ್ಧಾರ ಸಮಿತಿ ಸಲಹೆಗಾರ ಗೋಪಾಲ ಅಂಚನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ ಸ್ವಾಗತಿಸಿದರು.ಕಾರ್ಯದರ್ಶಿ ನಾಗೇಶ್ ದರ್ಬೆ ವಂದಿಸಿದರು. ಸಲಹೆಗಾರ ಜಯಾನಂದ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮೂಲಾಲಯವನ್ನು ತೆರವುಗೊಳಿಸುವರೇ ಭಕ್ತಾದಿಗಳಿಂದ ಕರಸೇವೆ ನಡೆಯಿತು. ಹರಿಧ್ವಾರದ ಸಾಧುಸಂತರು ಕ್ಷೇತ್ರಕ್ಕೆ ಬೇಟಿ ನೀಡಿ ಹರಸಿದರು. ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು. ಅನ್ನಸಂತರ್ಪಣೆ ಸೇವೆಯು ನಡೆಯಿತು.

Report by A.Gopal Anchan. Photo: Kartik Studio

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.