ಅವರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿ ಜೇಸಿಐ ಜೋಡುಮಾರ್ಗ ನೇತ್ರಾವತಿ ಹಾಗು ಶಾಲಾ ಆರೋಗ್ಯ ಕೂಟದ ಸಹಯೋಗದಲ್ಲಿ ನಡೆದ ಮಾನಸಿಕ ಆರೋಗ್ಯ ಮಾಹಿತಿ ಶಿಬಿರದಲ್ಲಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಮಾತನಾಡುತ್ತಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಕಮಲಾಕ್ಷ ಕಲ್ಲಡ್ಕ ವಹಿಸಿದ್ದರು. ವೇದಿಕೆಯಲ್ಲಿ ಎಸ್ಡಿಎಂಸಿ ಸದಸ್ಯರಾದ ಪ್ರತಿಭಾ ಸುಬ್ರಹ್ಮಣ್ಯ ಭಟ್, ಕಿರಿಯ ಆರೋಗ್ಯ ಸಹಾಯಕ ಶ್ರೀ ವೀರೇಶ್, ಶಿಕ್ಷಕ ಹಾಗು ಜೇಸಿಐ ಜೋಡುಮಾರ್ಗ ನೇತ್ರಾವತಿಯ ಉಪಾಧ್ಯಕ್ಷ ಜೇಸಿ ಹರಿಪ್ರಸಾದ್ ಕುಲಾಲ್ ಉಪಸ್ಥಿತರಿದ್ದರು. ಆರೋಗ್ಯ ಕೂಟದ ಉಪಾಧ್ಯಕ್ಷ ಚಿನ್ನಪ್ಪ ಜಾಲ್ಸೂರು ಸ್ವಾಗತಿಸಿ, ಅಧ್ಯಕ್ಷೆ ಭಾರತಿ ಹರೀಶ್ ವಂದಿಸಿದರು. ಪ್ರಬಂಧ ಸ್ಪರ್ಧೆಯಲ್ಲಿ ೯ನೇ ತರಗತಿಯ ಪ್ರತಿಕ್ಷಾ ಪ್ರಥಮ, ೧೦ನೇ ತರಗತಿಯ ಜಯಗೋವಿಂದ ದ್ವಿತೀಯ ಬಹುಮಾನ ಹಾಗೂ ೯ನೇ ತರಗತಿಯ ದೀಕ್ಷಿತಾ ತೃತೀಯ ಬಹುಮಾನ ಗಳಿಸಿದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…