ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಕೈತುತ್ತು ಕಾರ್ಯಕ್ರಮವು ಜರುಗಿತು.
ತಾಯಿ ಮತ್ತು ಮಗುವಿನ ಬಾಂಧ್ಯವವನ್ನು ಹೆಚ್ಚಿಸುವ ಈ ಕಾರ್ಯಕ್ರಮದಲ್ಲಿ ೧ ಮತ್ತು ೨ನೇ ತರಗತಿಯ ಮಕ್ಕಳ ತಾಯಂದಿರು ಭಾಗವಹಿಸಿ, ತಮ್ಮ ಮಗುವಿಗೆ ಮಾತ್ರ ಕೈತುತ್ತು ನೀಡದೆ ಬೇರೆ ಮಕ್ಕಳಿಗೆ ಕೈತುತ್ತು ನೀಡುವ ಮೂಲಕ ತಮ್ಮ ಮಗುವಿನ ಜೊತೆ ಇರುವ ಬಾಂಧವ್ಯದ ಜೊತೆಗೆ ಇತರ ಮಗುವಿನ ಜೊತೆ ಬಾಂಧವ್ಯ ಬೆಸೆಯಲು ಈ ಕಾರ್ಯಕ್ರಮವು ಸಾಕ್ಷಿಯಾಯಿತು. ಕಥೆ, ಹಾಡು ಹೇಳುತ್ತಾ , ಕೈತುತ್ತು ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ರೇಷ್ಮಾ ಹಾಗೂ ಗಾಯತ್ರಿ ತಾಯಿಯ ವಿಶೇಷತೆಯನ್ನು ಸಾರುವ ಹಾಡುಗಳನ್ನು ಹಾಡಿದರು.
ಈ ಕಾರ್ಯಕ್ರಮದಲ್ಲಿ ಡಾ. ಕಮಲಾ ಪ್ರಭಾಕರ್ ಭಟ್ , ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಹಾಗೂ ಶಾಲಾ ಮುಖ್ಯಶಿಕ್ಷಕರಾದ ರವಿರಾಜ್ ಕಣಂತೂರು ಉಪಸ್ಥಿತಿಯಿದ್ದರು.
Be the first to comment on "ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೈತುತ್ತು ಕಾರ್ಯಕ್ರಮ"