ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ಸಂಭ್ರಮ

www.bantwalnews.com Editor: Harish Mambady

ವಿಟ್ಲ Report:  ಇತಿಹಾಸ ಪ್ರಸಿದ್ದ ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವವು ಸಂಭ್ರಮ ಸಡಗರದಿಂದ ನಡೆಯಿತು

Pic: Shilpi Studio

ಜನವರಿ 14ರಂದು ಧ್ಜಜರೋಹಣ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಬಳಿಕ ಹಸಿರುವಾಣಿ ಹೊರೆಕಾಣಿಕೆ ನಡೆದಿದೆ. ಜ. 18ರಂದು ಕೇಪುವಿನಿಂದ ಶ್ರೀ ಮಲರಾಯ ದೈವದ ಭಂಡಾರ ಅದ್ಧೂರಿ ಮೆರವಣಿಗೆ ಮೂಲಕ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿತ್ತು. ಬಳಿಕ ಬಯ್ಯದ ಬಲಿ ನಡೆದಿದೆ. ವಿವಿಧ ದಿನಗಳಲ್ಲಿ ಕೆರೆ ಆಯನ, ಹೂತೇರು ನಡೆಯಿತು. ಸೋಮವಾರ ರಾತ್ರಿ ಕಡಂಬುವಿನಿಂದ ಕೊಡಮಣಿತ್ತಾಯ ದೈವದ ಭಂಡಾರ ಕ್ಷೇತ್ರಕ್ಕೆ ಆಗಮಿಸಿದ ಬಳಿಕ ರಥೋತ್ಸವ ಆರಂಭಗೊಂಡಿತು.

ರಥೋತ್ಸವ ವೇಳೆ ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತಾದಿಗಳು ರಥೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು. ರಥೋತ್ಸವದದ ಬಳಿಕ ದೇವರ ಬೀದಿ ಮೆರವಣಿಗೆ ನಡೆಯಿತು. ರಥಗದ್ದೆಯಿಂದ ಬೊಬ್ಬೆಕೇರಿ ಮೂಲಕ ವಿಟ್ಲ ಪೇಟೆಗೆ ಮೆರವಣಿಗೆ ಸಾಗಿದೆ. ಈ ಸಂದರ್ಭ ವಿಟ್ಲದ ವರ್ತಕರು ತಮ್ಮ ಅಂಗಡಿ ಮುಂದೆ ಆರತಿ ಎತ್ತಿ ದೇವರಿಗೆ ಪೂಜೆ ಸಲ್ಲಿಸಿದರು. ಬಳಿಕ ವಿಟ್ಲ ಅರಮನೆಯ ಬಾಕಿಮಾರ್ ಗದ್ದೆಗೆ ತೆರಳಿದೆ. ಅಲ್ಲಿ ಕಟ್ಟೆ ಪೂಜೆ ನೆರವೇರಿಸಿ ಅಪ್ಪರಿಪಾದೆಯಲ್ಲಿ ಕಟ್ಟೆ ಪೂಜೆ ನಡೆದು ದೇವಸ್ಥಾನಕ್ಕೆ ಮೆರವಣಿಗೆ ಬಂದಿದೆ. ಪಂಚಲಿಂಗೇಶ್ವರ ಶಯನೋತ್ಸವ ನಡೆಯಿತು.

ಬೆಳಿಗ್ಗೆ ಕ್ಷೇತ್ರದಲ್ಲಿ ದರ್ಶನ ಬಲಿ, ರಾಜಾಂಗಣದ ಬಟ್ಲು ಕಾಣಿಕೆ ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ವಿಟ್ಲ ಮಾದರಿ ಶಾಲಾ ವಠಾರದಲ್ಲಿ ಪಟ್ಲ ಯಕ್ಷಾಭಿಮಾನಿಗಳ ಬಳಗ ವಿಟ್ಲ ಅರ್ಪಿಸುವ ಬಪ್ಪನಾಡು ಮೇಳದವರಿಂದ ಬೊಳ್ಳಿದ ಬೊಲ್ಗುಡೆ ಯಕ್ಷಗಾನ ಬಯಲಾಟ ನಡೆಯಿತು.

ವಿಟ್ಲ ರಥೋತ್ಸವದ ಪ್ರಯುಕ್ತ ವಿವಿಧ ಕಡೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಲಾಗಿದ್ದು, ದೇವಾಲಯದ ಜಾತ್ರಾ ಗದ್ದೆ ಸಹಿತ ಸುತ್ತ ಮುತ್ತಲಿನ ಪ್ರದೇಶದಲ್ಲಿ ವಿಟ್ಲ ಠಾಣಾ ಎಸ್.ಐ. ಯಲ್ಲಪ್ಪರವರ ನೇತೃತ್ವದಲ್ಲಿ ವಿಶೇಷ ಬಂದೋ ಬಸ್ತ್‌ನ್ನು ಏರ್ಪಡಿಸಲಾಗಿತ್ತು. ಮೊದಲೇ ಕೆಲವೆಡೆ ಸಿಸಿ ಕ್ಯಾಮರಾವನ್ನು ಅಳವಡಿಸಲಾಗಿದ್ದರೂ ಜಾತ್ರಾ ಪ್ರಯುಕ್ತ ಕೆಲವೊಂದು ಆಯಕಟ್ಟಿನ ಸ್ಥಳದಲ್ಲಿ ಹೆಚ್ಚುವರಿ ಸಿ.ಸಿ ಕ್ಯಾಮರವನ್ನು ಅಳವಡಿಸಿಸಲಾಗಿತ್ತು. ಅಹಿತಕರ ಘಟನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಕಳ್ಳರ ಹಾವಳಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸರು ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ದೇವಸ್ಥಾನದ ಸಮೀಪ ಸಾರ್ವಜನಿಕರಿಗೆ ಸಹಾಯವಾಗಲೆಂದು ಪೊಲೀಸ್ ಔಟ್‌ಪೋಸ್ಟನ್ನು ತೆರೆಯಲಾಗಿತ್ತು.

ವಿಟ್ಲ, ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವದಿ ಜಾತ್ರೆಯ ಪ್ರಯುಕ್ತ ಕವಾಟೋದ್ಘಾಟನೆ ಮಹಾಪೂಜೆ, ಕಾಲಾವಧಿ ಬಟ್ಲ ಕಾಣಿಕೆ ಮತ್ತು ತುಲಾಭಾರ ನಡೆಯಿತು. Pic: Sadashiva Bana

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ಸಂಭ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*