ಗುಡ್ಡೆಯಂಗಡಿ ರಸ್ತೆಗೆ ವೈಜ್ಞಾನಿಕ ಹಂಪ್ಸ್ ನಿರ್ಮಿಸುವಂತೆ ಒತ್ತಾಯಿಸಿ ಧರಣಿ

ಬಂಟ್ವಾಳ: ರಾಜ್ಯ ಹೆದ್ದಾರಿಯ ಮೆಲ್ಕಾರ್ ಸಮೀಪದ ಗುಡ್ಡೆಯಂಗಡಿ ರಸ್ತೆಗೆ ವೈಜ್ಞಾನಿಕ ಹಂಪ್ಸ್ ನಿರ್ಮಿಸುವಂತೆ ಒತ್ತಾಯಿಸಿ ಸ್ಥಳೀಯರು ಗುರುವಾರ ಹೆದ್ದಾರಿಯಲ್ಲಿ ಧರಣಿ ನಡೆಸಿದರು.

ಗುಡ್ಡೆಯಂಗಡಿ ಜನನಿಬಿಡ ಪ್ರದೇಶವಾಗಿದ್ದು, ವಾಹನ ಸಂಚಾರವು ಅಧಿಕವಾಗಿದೆ. ಇದರಿಂದ ಪಾದಚಾರಿಗೆ ನಡೆದಾಡಲು ಹಾಗೂ ಸ್ಥಳೀಯರಿಗೆ ರಸ್ತೆ ದಾಟಲು ತೊಂದರೆಯಾಗುತ್ತಿದೆ. ಅಲ್ಲದೆ, ಇತ್ತೀಚೆಗೆ ಇದೇ ಸ್ಥಳದಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೋರ್ವರು ಧಾರುಣವಾಗಿ ಮೃತಪಟ್ಟಿದ್ದರು ಎಂದು ಸ್ಥಳೀಯ ನಿವಾಸಿ ಹಮೀದ್ ಸಲ್ಮಾನ್ ಆರೋಪಿಸಿದ್ದಾರೆ.

ಅಪಘಾತ ತಡೆಯುವ ಹಿನ್ನೆಲೆಯಲ್ಲಿ ಇಲ್ಲಿ ವೈಜ್ಞಾನಿಕ ಹಂಪ್ಸ್ ನಿರ್ಮಿಸುವಂತೆ ಒತ್ತಾಯಿಸಿ ಸ್ಥಳೀಯರು ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಾ ಬಂದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಸಂಧರ್ಭದಲ್ಲಿ ಸ್ಥಳೀಯರಾದ ಶಹೀದ್, ಹಮೀದ್ ಸಲ್ಮಾನ್, ಸಾಧಿಕ್, ಅಮಾನುಲ್ಲ, ಇರ್ಫಾನ್, ಅಲ್ತಾಫ್, ಅಬ್ದುಲ್ ರಹಿಮಾನ್, ಅಷ್ಪಾಕ್, ಫಾರೂಕ್ ಮತ್ತಿತರು ಹಾಜರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗುಡ್ಡೆಯಂಗಡಿ ರಸ್ತೆಗೆ ವೈಜ್ಞಾನಿಕ ಹಂಪ್ಸ್ ನಿರ್ಮಿಸುವಂತೆ ಒತ್ತಾಯಿಸಿ ಧರಣಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*