ಗುಡ್ಡೆಯಂಗಡಿ ಜನನಿಬಿಡ ಪ್ರದೇಶವಾಗಿದ್ದು, ವಾಹನ ಸಂಚಾರವು ಅಧಿಕವಾಗಿದೆ. ಇದರಿಂದ ಪಾದಚಾರಿಗೆ ನಡೆದಾಡಲು ಹಾಗೂ ಸ್ಥಳೀಯರಿಗೆ ರಸ್ತೆ ದಾಟಲು ತೊಂದರೆಯಾಗುತ್ತಿದೆ. ಅಲ್ಲದೆ, ಇತ್ತೀಚೆಗೆ ಇದೇ ಸ್ಥಳದಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೋರ್ವರು ಧಾರುಣವಾಗಿ ಮೃತಪಟ್ಟಿದ್ದರು ಎಂದು ಸ್ಥಳೀಯ ನಿವಾಸಿ ಹಮೀದ್ ಸಲ್ಮಾನ್ ಆರೋಪಿಸಿದ್ದಾರೆ.
ಅಪಘಾತ ತಡೆಯುವ ಹಿನ್ನೆಲೆಯಲ್ಲಿ ಇಲ್ಲಿ ವೈಜ್ಞಾನಿಕ ಹಂಪ್ಸ್ ನಿರ್ಮಿಸುವಂತೆ ಒತ್ತಾಯಿಸಿ ಸ್ಥಳೀಯರು ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಾ ಬಂದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಈ ಸಂಧರ್ಭದಲ್ಲಿ ಸ್ಥಳೀಯರಾದ ಶಹೀದ್, ಹಮೀದ್ ಸಲ್ಮಾನ್, ಸಾಧಿಕ್, ಅಮಾನುಲ್ಲ, ಇರ್ಫಾನ್, ಅಲ್ತಾಫ್, ಅಬ್ದುಲ್ ರಹಿಮಾನ್, ಅಷ್ಪಾಕ್, ಫಾರೂಕ್ ಮತ್ತಿತರು ಹಾಜರಿದ್ದರು.
ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್…