ಬಂಟ್ವಾಳದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಮೈದಾನದಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಉಜ್ವಲ ಯೋಜನೆಯಡಿ ಎರಡನೇ ಹಂತದ ಉಚಿತ ಅಡುಗೆ ಅನಿಲ ವಿತರಣೆ ಮತ್ತು ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ಸಚಿವ ರಮೇಶ್ ಜಿಗಜಿಣಗಿ ಉದ್ಘಾಟಿಸಿದರು. ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷ, ಸಂಸದ ಪ್ರಹ್ಲಾದ ಜೋಷಿ , ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನಪರಿಷತ್ತು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಸಂಜೀವ ಮಠಂದೂರು, ಎಸ್.ಅಂಗಾರ, ಸಿ.ಟಿ.ರವಿ, ಐಒಸಿಎಲ್ ಮುಖ್ಯ ಜನರಲ್ ಮ್ಯಾನೇಜರ್ ಕೆ.ಶೈಲೇಂದ್ರ, ಬಿಡಿಎಂ ಬಿಪಿಸಿಎಲ್್ ಪ್ರೇಮನಾಥ್ ಟಿ, ಬಿಪಿಸಿಎಲ್ ಕರ್ನಾಟಕದ ಮುಖ್ಯಸ್ಥ ಪ್ರದೀಪ್ ನಾಯರ್ ಸಹಿತ ವಿವಿಧ ತೈಲ ಕಂಪನಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು.
www.bantwalnews.com Editor: Harish Mambady For VIDEO CLICK HERE