ಜನವರಿ 25ರಂದು ಭಾರತ ಚುನಾವಣಾ ಆಯೋಗದ ಸಂಸ್ಥಾಪನ ದಿನವಾಗಿದ್ದು, ಲಕ್ಷಾಂತರ ಯುವ ಜನತೆ ಪ್ರತಿ ಜನವರಿಯಲ್ಲಿ ದೇಶಾದ್ಯಂತ ನಡೆಯುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನೋಂದಾವಣೆಗೊಳ್ಳುತ್ತಾರೆ. ಮತದಾನ ಪ್ರಕ್ರಿಯೆಯಲ್ಲಿ ಯುವ ಜನತೆಯಲ್ಲಿ ಜಾಗ್ರತಿ ಮೂಡಿಸಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಲು ಮತದಾರರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ ಎಂದು ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜು ಬಂಟ್ವಾಳ ಉಪನ್ಯಾಸಕರಾದ ಮೋಹನ್ ಎನ್ ಹೇಳಿದರು.
ಇದೇ ಸಂದರ್ಭದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಬೋದಿಸಲಾಯಿತು. ಈ ಸಂದರ್ಭ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರು ಮತದಾನದ ಮಹತ್ವ ಹಾಗೂ ಜಾಗೃತಿ ಮೂಡಿಸುವ ಬಗ್ಗೆ ಮಾತನಾಡಿದರು.
ಪ್ರಭಾರ (ಚುನಾವಣಾ) ಉಪ ತಹಶೀಲ್ದಾರ್ ಸೀತಾರಾಮ, ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್ ಬಿ. ಮೂಡ ಗ್ರಾಮ ಲೆಕ್ಕಾಧಿಕಾರಿ ಶಿವನಂದ ನಾಟೆಕಾರ್, ತಾಲೂಕು ಕಚೇರಿ ಸಿಬಂದಿ, ತಾಲೂಕು ಪಂಚಾಯತ್ ಸಿಬಂದಿ ವರ್ಗ. ಗ್ರಾಮ ಸಹಾಯಕರು ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು. ಈ ಸಂದರ್ಭದಲ್ಲಿ ಯುವ ಮತದಾರರಿಗೆ ಮತದಾರರ ಗುರುತುಚೀಟಿ ಸಾಂಕೇತಿಕವಾಗಿ ವಿತರಿಸಲಾಯಿತು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿದರು, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು ವಂದಿಸಿದರು.