www.bantwalnews.comEditor: Harish Mambady
ಬಂಟ್ವಾಳ: ಸಂವಿದಾನದತ್ತ ಸೌಲಭ್ಯಗಳನ್ನು ತಿಳಿದುಕೊಳ್ಳಬೇಕು. ಸರಕಾರಿ ಕಚೇರಿಗೆ ನಾನಾ ಸಮಸ್ಯೆ ಹೊತ್ತು ಬರುವ ಜನರ ಮುಖದಲ್ಲಿ ಮಂದಹಾಸ ಮೂಡಿಸುವುದೇ ನಿಜವಾದ ದೇಶ ಸೇವೆ ಈ ದೇಶದ ಪ್ರತಿಯೊಬ್ಬ ನಾಗರಿಕರು ಕೂಡ ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬಂಟ್ವಾಳ ತಾಲೂಕು ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಿನಿ ವಿಧಾನಸೌಧ ಮುಂಭಾಗ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂವಿಧಾನದತ್ತ ಹಕ್ಕುಗಳನ್ನು ಚಲಾಯಿಸುವುದರೊಂದಿಗೆ ಕಷ್ಟಸಹಿಷ್ಣುಗಳಾಗುವ ಹಾಗೂ ಗಡಿಯಲ್ಲಿರುವ ಸೈನಿಕರ ಶ್ರಮ ಸಾರ್ಥಕವಾಗುವಂತೆ ಮಾಡುವ ಕೆಲಸಗಳನ್ನು ಮಾಡಬೇಕು ಎಂದು ಬೊಳಂತಿಮೊಗರು ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯ ಸಹಶಿಕ್ಷಕ ವಿಠಲ ನಾಯಕ್ ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಗಣರಾಜ್ಯೋತ್ಸವದ ಸಂದರ್ಭ ತಾಲೂಕಿನ ನಾಗರಿಕರು ಸಾಂವಿಧಾನಿಕ ಹಕ್ಕುಗಳನ್ನು ಅರಿತು ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು.
ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಬಂಟ್ವಾಳ ಎಎಸ್ಪಿ ಸೈದುಲು ಅಡಾವತ್, ಸ್ವಾತಂತ್ರ್ಯ ಹೋರಾಟಗಾರ ಶಾಮರಾವ್ ಆಚಾರ್ಯ ಮಾತನಾಡಿ ಸಂದೇಶ ನೀಡಿದರು. ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್, ಸಿಡಿಪಿಒ ಸುಧಾಜೋಷಿ ವೇದಿಕೆಯಲ್ಲಿದ್ದರು. ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ವಂದಿಸಿದರು. ಕಲಾವಿದ ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.
ಪೊಲೀಸ್ ಎಸ್.ಐ. ಚಂದ್ರಶೇಖರ್ ನೇತೃತ್ವದಲ್ಲಿ ಪೊಲೀಸ್, ಗೃಹರಕ್ಷಕ ದಳ, ಎನ್.ಸಿ.ಸಿ., ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್, ಕಬ್, ಬುಲ್ ಬುಲ್ ಮತ್ತು ನಾನಾ ಶಾಲಾ ವಿದ್ಯಾರ್ಥಿಗಳಿಂದ ಮೆರವಣಿಗೆ, ಪಥಸಂಚಲನ, ಪುರಸಭೆ ವ್ಯಾಪ್ತಿಯ
ಉಪತಹಶೀಲ್ದಾರ್ ರಾಜೇಶ್ ನಾಯ್ಕ್ ,ರವಿಶಂಕರ್, ಪ್ರಭಾರ ಉಪತಹಶೀಲ್ದಾರ್ ಸೀತಾರಾಮ, ಗ್ರೆಟ್ಟಾ ಮಸ್ಕರೇಞಸ್, ಕಂದಾಯ ನಿರೀಕ್ಷಕ ರಾಮ ಕಾಟಿ ಪಳ್ಳ, ನವೀನ್ ಬೆಂಜನ ಪದವು, ದಿವಾಕರ ಮುಗುಳಿಯ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಹಾಜರಿದ್ದರು.
Be the first to comment on "ಸರಕಾರಿ ಕಚೇರಿಗೆ ಬರುವವರ ಮುಖದಲ್ಲಿ ಮಂದಹಾಸ ಮೂಡಿಸುವುದೇ ನಿಜವಾದ ದೇಶಸೇವೆ: ತಹಶೀಲ್ದಾರ್"