ಪ್ರಪಂಚದಲ್ಲಿ ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಮತದಾರಲ್ಲಿ ಜಾಗೃತಿಯ ಕೊರತೆಯಿಂದ ಮತದಾನದ ಮುನ್ನ ಹಲವು ಆಮಿಷಗಳಿಗೆ ಬಲಿಯಾಗಿ ಆತ್ಮಗೌರವಕ್ಕೆ ವಿರುದ್ಧವಾಗಿ ಅನರ್ಹ ಅಭ್ಯರ್ಥಿಗಳಿಗೆ ಮತದಾನ ಮಾಡುತ್ತಿರುವುದು ಸಾಮಾನ್ಯವಾಗಿದೆ, ಈ ನಿಟ್ಟಿನಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವಂತಹ ಕಾರ್ಯವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಹೇಳಿದರು.
ಜಾಹೀರಾತು
ಈ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಹಾಗೂ ಮತದಾರರ ಸಾಕ್ಷರತಾ ಕ್ಲಬ್‌ಗಳ ಸಂಚಾಲಕ ಪ್ರೊ. ಬಾಲಸುಬ್ರಹ್ಮಣ್ಯ ಪಿ.ಎಸ್ ಬೋಧಿಸಿದರು. ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮನೆ ಮನೆ ಭೇಟಿ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಭಾಷಣ, ಕ್ವಿಜ್ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಬೇಕಾದರೆ ಮತದಾನದ ಬಗ್ಗೆ ಜಾಗೃತಿ ಅಗತ್ಯ"
Be the first to comment on "ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಬೇಕಾದರೆ ಮತದಾನದ ಬಗ್ಗೆ ಜಾಗೃತಿ ಅಗತ್ಯ"