ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಬೇಕಾದರೆ ಮತದಾನದ ಬಗ್ಗೆ ಜಾಗೃತಿ ಅಗತ್ಯ

ಬಂಟ್ವಾಳ: ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಬೇಕಾದರೆ ಮತದಾನದ ಬಗ್ಗೆ ಜಾಗೃತಿ ಅಗತ್ಯ ಎಂದು ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಗಿರೀಶ್ ಭಟ್ ಅಜಕ್ಕಳ ಹೇಳಿದರು. ಕಾಲೇಜಿನ ರಾಜ್ಯಶಾಸ್ತ್ರ ಸಂಘ ಮತ್ತು ಮತದಾರರ ಸಾಕ್ಷರತಾ ಕ್ಲಬ್ ಆಶ್ರಯದಲ್ಲಿ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಪಂಚದಲ್ಲಿ ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಮತದಾರಲ್ಲಿ ಜಾಗೃತಿಯ ಕೊರತೆಯಿಂದ ಮತದಾನದ ಮುನ್ನ ಹಲವು ಆಮಿಷಗಳಿಗೆ ಬಲಿಯಾಗಿ ಆತ್ಮಗೌರವಕ್ಕೆ ವಿರುದ್ಧವಾಗಿ ಅನರ್ಹ ಅಭ್ಯರ್ಥಿಗಳಿಗೆ ಮತದಾನ ಮಾಡುತ್ತಿರುವುದು ಸಾಮಾನ್ಯವಾಗಿದೆ, ಈ ನಿಟ್ಟಿನಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವಂತಹ ಕಾರ್ಯವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಹೇಳಿದರು.

ಜಾಹೀರಾತು

ಈ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಹಾಗೂ ಮತದಾರರ ಸಾಕ್ಷರತಾ ಕ್ಲಬ್‌ಗಳ ಸಂಚಾಲಕ ಪ್ರೊ. ಬಾಲಸುಬ್ರಹ್ಮಣ್ಯ ಪಿ.ಎಸ್ ಬೋಧಿಸಿದರು. ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮನೆ ಮನೆ ಭೇಟಿ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಭಾಷಣ, ಕ್ವಿಜ್ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಬೇಕಾದರೆ ಮತದಾನದ ಬಗ್ಗೆ ಜಾಗೃತಿ ಅಗತ್ಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*