ಪ್ರಪಂಚದಲ್ಲಿ ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಮತದಾರಲ್ಲಿ ಜಾಗೃತಿಯ ಕೊರತೆಯಿಂದ ಮತದಾನದ ಮುನ್ನ ಹಲವು ಆಮಿಷಗಳಿಗೆ ಬಲಿಯಾಗಿ ಆತ್ಮಗೌರವಕ್ಕೆ ವಿರುದ್ಧವಾಗಿ ಅನರ್ಹ ಅಭ್ಯರ್ಥಿಗಳಿಗೆ ಮತದಾನ ಮಾಡುತ್ತಿರುವುದು ಸಾಮಾನ್ಯವಾಗಿದೆ, ಈ ನಿಟ್ಟಿನಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವಂತಹ ಕಾರ್ಯವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಹೇಳಿದರು.
ಈ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಹಾಗೂ ಮತದಾರರ ಸಾಕ್ಷರತಾ ಕ್ಲಬ್‌ಗಳ ಸಂಚಾಲಕ ಪ್ರೊ. ಬಾಲಸುಬ್ರಹ್ಮಣ್ಯ ಪಿ.ಎಸ್ ಬೋಧಿಸಿದರು. ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮನೆ ಮನೆ ಭೇಟಿ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಭಾಷಣ, ಕ್ವಿಜ್ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.