ಬಿ.ಸಿ.ರೋಡ್ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಬೆಳಗ್ಗೆ 10ರಿಂದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ‘ನಾ ಕಲಿತ ಶಾಲೆಯ ತೀರಿಸುವೆ ಋಣವ ಇದು ನನ್ನ ಜವಾಬ್ದಾರಿ’ ಎಂಬ ಶೀರ್ಷಿಕೆಯಡಿ ಸರಕಾರಿ ಶಾಲೆಗಳ ಉನ್ನತೀಕರಣಕ್ಕಾಗಿ ಹಳೇ ವಿದ್ಯಾರ್ಥಿಗಳ ಸಂಘಗಳ ಬಲವರ್ಧನೆ ಕಾರ್ಯಕ್ರಮ ಜ.29ರಂದು ನಡೆಯಲಿದೆ.
ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಜಿಪಂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಜನಾರ್ದನ ಗೌಡ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ರಾಜ್ಯ ಮಕ್ಕಳ ಆಯೋಗ ಸದಸ್ಯ ಆನಂದ ಲೋಬೊ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೆನ್ನಿ ಡಿಸೋಜ ಮುಖ್ಯ ಅತಿಥಿಗಳಾಗಿರುವರು. ಸಂಪನ್ಮೂಲ ವ್ಯಕ್ತಿಯಾಗಿ ಯುನಿಸೆಫ್ ಮಕ್ಕಳ ಸಂರಕ್ಷಣಾ ಘಟಕದ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.