ಬಂಟ್ವಾಳ

ನದಿಯ ಕಲುಷಿತ ನೀರು, ರೋಗದ ಭೀತಿ : ಗ್ರಾಮಸ್ಥರ ಆರೋಪ

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ 3ನೆ ಬ್ಲಾಕ್ನಲ್ಲಿರುವ ನೀರು ಶುದ್ಧೀಕರಣ ಘಟಕವು ಹಾಳಾಗಿದ್ದು, ನೇರವಾಗಿ ನದಿಯ ಮೂಲಕವೇ ನೀರು ಪೂರೈಕೆ ಮಾಡಲಾಗುತ್ತಿದೆ. ಈ ನೀರು ಕುಡಿಯಲು ಅಯೋಗ್ಯವಾಗಿದ್ದು, ಇದರಿಂದ ಜನರು ರೋಗದ ಭೀತಿ ಎದುರಿಸುತ್ತಿದ್ದಾರೆ ಎಂದು ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ.

ಜಾಹೀರಾತು

ಬಿ.ಸಿ.ರೋಡಿನ ಪ್ರೆಸ್ ಕ್ಲಬ್ನ ಸುದ್ದಿಗೋಷ್ಠಿಯಲ್ಲಿ ಸಜೀಪಮುನ್ನೂರು ಗ್ರಾಪಂ ಸದಸ್ಯ ಹಂಝ ಮಾತನಾಡಿ, ಜಿಲ್ಲಾ ಪಂಚಾಯತ್ ಅನುದಾನದಡಿ ಸುಮಾರು ೨೮ ಲಕ್ಷ ರೂ. ವೆಚ್ಚದಲ್ಲಿ ಸಜೀಪ ಮುನ್ನೂರು ಗ್ರಾಮದಲ್ಲಿ ನೀರು ಶುದ್ಧೀಕರಣ ಘಟಕವನ್ನು ನಿರ್ಮಿಸಲಾಗಿದೆ. ಅದಲ್ಲದೆ, ಇದರ ಕಾಮಗಾರಿ ಕಳಪೆ ಹಾಗೂ ಅಪೂರ್ಣವಾಗಿದ್ದು, ಕಳೆದ ೮ ತಿಂಗಳಿಂದ ಘಟಕವು ಕಾರ್ಯನಿರ್ವಸುತ್ತಿಲ್ಲ. ಇದರಿಂದ ಜನರಿಗೆ ಕುಡಿಯಲು ನೇರವಾಗಿ ನದಿಯಿಂದಲೇ ನೀರು ಪೂರೈಕೆ ಮಾಡುತ್ತಿದೆ. ಇದರಿಂದ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಅಭಾವ ಉಂಟಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಶುದ್ಧೀಕರಣ ನೀರಿನ ಘಟಕದಿಂದ ೧೦೦ ಮನೆಗಳಿಗೆ ಮಾತ್ರ ನೀರು ಸರಬರಾಜು ಆಗುತ್ತಿದೆ. ಆದರೆ, ಸಜೀಪ ಮುನ್ನೂರು ಗ್ರಾಮದಲ್ಲಿ ಸುಮಾರು ೭೫೬ ಮನೆಗಳಿಗೆ ತಲುಪುತ್ತಿಲ್ಲ ಎಂದು ಅವರು, ಎಲ್ಲ ಮನೆಗಳಿಗೆ ಕುಡಿಯುವ ನೀರಿನ ಶಾಶ್ವತ ಪರಿಹಾರ ನೀಡುವಂತೆ ಅವರು ಒತ್ತಾಯಿಸಿದ್ದಾರೆ. ೨೦ ದಿನಗಳೊಳಗೆ ಶುದ್ಧೀಕರಣ ಘಟಕವನ್ನು ಸರಿಪಡಿಸಿ, ಶುದ್ಧ ಕುಡಿಯುವ ನೀರು ಸರಬರಾಜಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು. ಇಲ್ಲದಿದ್ದರೆ, ಗ್ರಾಮ ಪಂಚಾಯತ್ಗೆ ಬೀಗ ಜಡಿದು ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಜೀಪಮುನ್ನೂರು ಗ್ರಾಪಂ ಸದಸ್ಯರಾದ ಮಜೀದ್ ಆಲಾಡಿ, ಸಮೀರ್ ನಂದಾವರ, ಗ್ರಾಮ ಸಮಿತಿಯ ಹಕೀಂ, ಫಾರೂಕ್, ಎಸ್ಡಿಪಿಐ ಸದಸ್ಯರಾದ ಸಿದ್ದೀಕ್, ಮುಸ್ತಫ, ಸಾದಿಕ್, ಸವಾದ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:

| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…

23 hours ago

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

3 days ago