ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಿ.ಸಿ.ರೋಡ್ ಬೈಪಾಸಿನ ಆರಾಧನಾ ಫ್ರೆಂಡ್ಸ್ ಸರ್ಕಲ್ ವತಿಯಿಂದ ಫೆಬ್ರವರಿ 3ರಂದು ಯಕ್ಷಗಾನ ಬಯಲಾಟ, ಸನ್ಮಾನ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಸಂಜೆ ನಡೆಯಲಿದೆ.
ಸಂಜೆ 6ರಿಂದ ಹನುಮಗಿರಿ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯಿಂದ ದೇವಿ ಮಹಾತ್ಮೆ ಯಕ್ಷಗಾನ, 8 ಗಂಟೆಗೆ ಸೀತಾರಾಮ ಕುಮಾರ್ ಕಟೀಲು ಅವರಿಗೆ ಆರಾಧನಾ ಪ್ರಶಸ್ತಿ ಪ್ರದಾನ ಮತ್ತು ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿಧಾತ್ರಿ ಸೋಮಯಾಜಿ ಅವರಿಗೆ ಸನ್ಮಾನ ಸಮಾರಂಭ ನಡೆಯಲಿರುವುದು ಎಂದು ಆರಾಧನಾ ಫ್ರೆಂಡ್ಸ್ ಸರ್ಕಲ್ ಬೈಪಾಸ್ ಬಿ.ಸಿ.ರೋಡ್ ಪ್ರಕಟಣೆ ತಿಳಿಸಿದೆ.