ಬಂಟ್ವಾಳ

ಜನರು ಬಳಕೆ ಮಾಡುವುದು ನಿಲ್ಲಿಸಿದರೆ ಪ್ಲಾಸ್ಟಿಕ್ ಉತ್ಪಾದನೆಯೇ ನಿಲ್ಲಲು ಸಾಧ್ಯ

  • ನಮ್ಮ ತ್ಯಾಜ್ಯ ನಮ್ಮ ಹೊಣೆ: ಬಂಟ್ವಾಳ ತಾಲೂಕು ಮಟ್ಟದ ಕಾರ್ಯಾಗಾರ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ: ಪ್ಲಾಸ್ಟಿಕ್ ನಿಷೇಧದ ಘೋಷಣೆಗಳು ಬರುತ್ತಿವೆಯೇ ಹೊರತು, ಅವುಗಳನ್ನು ಉತ್ಪಾದಿಸುವ ಕಂಪನಿಗಳನ್ನು ಮುಚ್ಚುವ ವಿಚಾರದ ಕುರಿತು ಇನ್ನೂ ಸ್ಪಷ್ಟ ನಿರ್ದೇಶನಗಳು ದೊರಕಿಲ್ಲ. ಈ ಹಿನ್ನೆಲೆಯಲ್ಲಿ ನಿಷೇಧ ನಮ್ಮಿಂದಲೇ ಆರಂಭವಾಗಲಿ. ಜನ ಬಳಕೆ ಮಾಡುವುದನ್ನು ನಿಲ್ಲಿಸಿದರೆ ಪ್ಲಾಸ್ಟಿಕ್ ತನ್ನಿಂದ ತಾನಾಗಿಯೇ ಕಡಿಮೆ ಆಗಲಿದೆ ಎಂದು ಉಡುಪಿ ಜಿಲ್ಲೆಯ ವಾರಂಬಳ್ಳಿ ಪಿಡಿಒ ಮಹೇಶ್ ಹೇಳಿದರು.

ದ.ಕ ಜಿ.ಪಂಚಾಯತ್ ,ಸ್ವಚ್ಛ ಭಾರತ್ ಮಿಷನ್ , ತಾ.ಪಂ ಬಂಟ್ವಾಳ ಇದರ ವತಿಯಿಂದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಫೆ.2 ರಂದು ಏರ್ಪಡಿಸಲಾದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಮ್ಮ ತ್ಯಾಜ್ಯ – ನಮ್ಮ ಹೊಣೆ” ಪರಿಕಲ್ಪನೆಯಲ್ಲಿ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆಯ ತಾಲೂಕು ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಜಾಹೀರಾತು

ನಿಷೇಧ ಮಾಡಲು ಇಚ್ಛಾಶಕ್ತಿ ಬೇಕು. ಪ್ಲಾಸ್ಟಿಕ್ ದುಷ್ಪರಿಣಾಮ ನಮಗೇ ಗೊತ್ತಿರಬೇಕು. ಒಂದು ಪ್ಲಾಸ್ಟಿಕ್ ಸುಡುವುದು ಹಾಗೂ ನೂರು ಸಿಗರೇಟ್ ಒಟ್ಟಿಗೇ ಸುಡುವುದೂ ಒಂದೇ ಎಂಬ ಅರಿವು ನಮಗಿರಬೇಕು ಎಂದ ಅವರು, ನಮ್ಮ ಇತಿಮಿತಿಯಲ್ಲಿ ಗ್ರಾಮ ಪಂಚಾಯತ್ ಹೇಗೆ ಮಾದರಿಯಾಗಿ ಪ್ಲಾಸ್ಟಿಕ್ ನಿಷೇಧ ಮಾಡಬಹುದು, ಘನ ಮತ್ತು ದ್ರವ ಸಂಪನ್ಮೂಲಗಳನ್ನು ಹೇಗೆ ನಿರ್ವಹಣೆ ಮಾಡಬಹುದು ಎಂಬ ಮಾಹಿತಿಯನ್ನು ನೀಡಿದರು.

ಅಧ್ಯಕ್ಷತೆ ವಹಿಸಿದ್ದ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿ ಹಾಗೂ ಎಲ್ಲಾ ಸದಸ್ಯರು ಪಕ್ಷಭೇದ ಮರೆತು ಕಾರ್ಯನಿರ್ವಹಿಸಿದಾಗ ಸ್ವಚ್ಛತಾ ಆಂದೋಲನ ಯಶಸ್ವಿಯಾಗುವುದು. ಸಾರ್ವಜನಿಕರು ಸ್ಚಚ್ಛತಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಳ್ಳುವ ಮೂಲಕ  ಗ್ರಾಮದ ನೈರ್ಮಲ್ಯವನ್ನು ತಾವೇ ಮಾಡಿಕೊಳ್ಳಲು ಸಾಧ್ಯವಾಗುವುದು ಎಂದು ಹೇಳಿದರು.

ಜಾಹೀರಾತು

ಕುಂದಾಪುರದ ವಂಡ್ಸೆ ಗ್ರಾ,ಪಂ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ತ್ಯಾಜ್ಯ ಸಂಗ್ರಹ ಹಾಗೂ ವಿಲೇವಾರಿಯ ಬಗ್ಗೆ ಮಾಹಿತಿ ನೀಡಿದರು. ಸ್ವಚ್ಛಭಾರತ ಮಿಶನ್ ಜಿಲ್ಲಾ ಸಂಯೋಜಕಿ ಮಂಜುಳಾ ಜಿ. ಕಾರ್ಯಕ್ರಮ ಸಂಯೋಜಿಸಿದರು.

ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಕಮಲಾಕ್ಷಿ ಕೆ ಪೂಜಾರಿ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ ಸದಸ್ಯರಾದ ರತ್ನಾವತಿ ಜಯರಾಮ ಶೆಟ್ಟಿ, ಯಶವಂತ ಪೂಜಾರಿ  ಪೊಳಲಿ, ಲಕ್ಷ್ಮೀ ಗೋಪಾಲ ಆಚಾರ್ಯ ಬಾಳ್ತಿಲ , ಕೆ.ಸಂಜೀವ ಪೂಜಾರಿ ಸಜಿಪ, ಹೈದರ್ ಕೈರಂಗಳ, ಆದಂ ಕುಂಞ, ವನಜಾಕ್ಷಿ, ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ಆರೋಗ್ಯಾಧಿಕಾರಿ ದೀಪಾ ಪ್ರಭು, ಶಿಕ್ಷಣ ಇಲಾಖೆಯ ರತ್ನಾವತಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ