ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ: ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಅವರ ಹತ್ಯೆಯನ್ನು ಅಣುಕು ಪ್ರದರ್ಶನ ಮಾಡಿರುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಹಾಗೂ ಗೋಡ್ಸೆಯ ಮರುಜನ್ಮ ಅನುಮತಿಸಲಾರೆವು ಎಂಬ ಘೋಷಣೆಯೊಂದಿಗೆ ಎಸ್ಡಿಪಿಐ ಬಂಟ್ವಾಳ ಕ್ಷೇತ್ರದ ವತಿಯಿಂದ ಬಿ.ಸಿ.ರೋಡ್ ಮಿನಿವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್.ಎಚ್., ಎಸ್ಡಿಪಿಐ ಬಂಟ್ವಾಳ ಕ್ಷೇತ್ರದ ಉಪಾಧ್ಯಕ್ಷ ಖಲಂದರ್ ಪರ್ತಿಪ್ಪಾಡಿ ಎಸ್ಡಿಪಿಐ ಕ್ಷೇತ್ರಾಧ್ಯಕ್ಷ ಯೂಸುಫ್ ಆಲಡ್ಕ ಮಾತನಾಡಿ ಕೃತ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಬಳಿಕ ಬಂಟ್ವಾಳ ತಹಶೀಲ್ದಾರ್ ರಶ್ಮಿ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಮುನೀಶ್ ಅಲಿ, ಇದ್ರೀಸ್ ಪಿ.ಜೆ., ಕ್ಷೇತ್ರ ಕಾರ್ಯದರ್ಶಿ ಇಸ್ಮಾಯಿಲ್, ಇಸಾಕ್ ತಲಪಾಡಿ, ಇಕ್ಬಾಲ್ ಹಾಜರಿದ್ದರು. ಸಮಿತಿ ಸದಸ್ಯ ಮಲಿಕ್ ಕೊಳಕೆ ಸ್ವಾಗತಿಸಿ, ವಂದಿಸಿದರು.
Be the first to comment on "ಬಿ.ಸಿ.ರೋಡ್ ಮಿನಿ ವಿಧಾನಸೌಧದ ಎದುರು ಎಸ್ಡಿಪಿಐ ಪ್ರತಿಭಟನೆ"