ಅವಕಾಶ ಸದುಪಯೋಗ ಮಾಡಿಕೊಂಡಾಗ ಸಮಾಜದಲ್ಲಿ ಪರಿಪೂರ್ಣ ವ್ಯಕ್ತಿಯಾಗಿ ಬೆಳೆಯಲು ಸಾಧ್ಯ ಎಂದು ಬಂಟ್ವಾಳ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಮತ್ತು ಹಳೆವಿದ್ಯಾರ್ಥಿ ಸುದರ್ಶನ್ ಜೈನ್ ಹೇಳಿದರು.
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಕಾಲೇಜು ನಡೆಸಿದ ಬಂಟ್ವಾಳ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿ ಕೊಂಡ ಅಂತರ್ ಶಾಲೆ ಕ್ವಿಜ್ ಸ್ಪರ್ಧೆ ಸಿದ್ಧಾಂತ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಬಂಟ್ವಾಳ ಎಸ್.ವಿ.ಎಸ್ ಕಾಲೇಜು ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಅಧ್ಯಕ್ಷತೆ ವಹಿಸಿದರು.
ಬಂಟ್ವಾಳ ತಾಲೂಕಿನ ಸುಮಾರು 30 ಪ್ರೌಢಶಾಲೆಗಳಲ್ಲಿ ಆಯ್ಕೆ ಮಾಡಿದ ವಿದ್ಯಾರ್ಥಿಗಳ ತಂಡಗಳು ಪಾಲ್ಗೊಂಡವು. ಬಂಟ್ವಾಳ ವಿದ್ಯಾಗಿರಿ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆ ವಿದ್ಯಾರ್ಥಿ ತರುಣ್ ಪಿ. ಹೊಳ್ಳ ಮತ್ತು ಸೂರಜ್ ಎಸ್. ತಂಡ ವಿನ್ನರ್ ಹಾಗೂ ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆ ವಿದ್ಯಾರ್ಥಿ ರಮೇಶ ಮತ್ತು ವೀರೇಶ್ ತಂಡ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡರು. ಸಹಸಂಯೋಜಕ ಮತ್ತು ಅರ್ಥಶಾಸ್ತ್ರ ಉಪನ್ಯಾಸಕ ಪ್ರದೀಪ್ ಪೂಜಾರಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಸಿದ್ಧಾಂತ್ ಕಾರ್ಯಕ್ರಮ ಸಂಯೋಜಕಿ ಮತ್ತು ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಅಖೀಲಾ ಪೈ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿ ಸಂಯೋಜಕಿ ತೇಜಸ್ವಿ ಸ್ವಾಗತಿಸಿದರು. ವಿದ್ಯಾರ್ಥಿ ಸಂಯೋಜಕ ಚೇತನ್ ಎಸ್. ವಂದಿಸಿದರು. ತೃತೀಯ ಬಿಕಾಂ ವಿದ್ಯಾರ್ಥಿನಿ ಕೃತಿ ನಿರೂಪಿಸಿದರು.