ಬಂಟ್ವಾಳ

ಲೋಕಸಭೆ ಚುನಾವಣೆ: ಬಂಟ್ವಾಳದಲ್ಲಿ ಬಿಜೆಪಿ ಸಿದ್ಧತಾ ಸಭೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ: ಭ್ರಷ್ಟಾಚಾರ ರಹಿತ ಆಡಳಿತ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯನ್ನಾಗಿಸಲು ಜನತೆ ನಿಶ್ಚಯಿಸಿದ್ದಾರೆ ಎಂದು ದ.ಕ.ಜಿಲ್ಲಾ ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ ತಿಳಿಸಿದ್ದಾರೆ.

ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ  ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖ ಬಿಜೆಪಿ ಕಾರ್ಯಕರ್ತರ ಸಿದ್ದತಾ ಸಭೆ ಮತ್ತು  ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ವಕ್ತಾರ, ಬಂಟ್ವಾಳ ತಾಲೂಕು ಚುನಾವಣಾ ಸಂಚಾಲಕ ಹರಿಕೃಷ್ಣ ಬಂಟ್ವಾಳ, ವಿಭಾಗ ಪ್ರಭಾರಿ ಪ್ರತಾಪಸಿಂಹ ನಾಯಕ್, ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ದ.ಕ.ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಪೈ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂದೇಶ್ ಕುಮಾರ್ ಶೆಟ್ಟಿ, ಜಿಪಂ ಸದಸ್ಯರಾದ ರವೀಂದ್ರ ಕಂಬಳಿ, ಕಮಲಾಕ್ಷಿ ಪೂಜಾರಿ ಇದ್ದರು. ಬಂಟ್ವಾಳಕ್ಷೇತ್ರ ಬಿಜೆಪಿ ಸಮಿತಿ ಪ್ರ.ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ ಸ್ವಾಗತಿಸಿದರು.ಮೋನಪ್ಪ ದೇವಸ್ಯ ವಂದಿಸಿದರು.ಬಳಿಕ ಕಾರ್ಯಕರ್ತರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ