ಬಂಟ್ವಾಳ

ಕೇಂದ್ರ ಕಾರಾಗೃಹ ಅಧಿಕಾರಿಗಳ ವಸತಿ ಸಮುಚ್ಛಯ – ಜಮೀನು ಪರಿಶೀಲನೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ : ತಾಲೂಕಿನ  ಇರಾ ಮತ್ತು ಕುರ್ನಾಡು ಗ್ರಾಮದಲ್ಲಿ ನಿರ್ಮಾಣವಾಗಲಿರುವ ಕೇಂದ್ರ ಕಾರಾಗೃಹ ಮತ್ತು ಅಧಿಕಾರಿಗಳ ವಸತಿ ಸಮುಚ್ಚಯದ ಜಮೀನು ಮಂಗಳವಾರ ಪರಿಶೀಲಿಸಿದ  ಎಡಿಜಿಪಿ ಎನ್.ಎಸ್.ಮೇಘರಿಕ್   ಈ ಸಂಬಂಧ  ಅಧಿಕಾರಿಗಳ ಜೊತೆ  ಚರ್ಚಿಸಿ ಮಾಹಿತಿ ಪಡೆದರು.

ಜಾಹೀರಾತು

 

ಪ್ರಸ್ತುತ ಮಂಗಳೂರು ಕೆನರಾ ಕಾಲೇಜ್ ಪಕ್ಕದಲ್ಲಿರುವ ಹಳೆಯ ಕಾರಾಗೃಹ ಜಾಗದ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಮಂಗಳೂರು ಕ್ಷೇತ್ರಕ್ಕೊಳಪಟ್ಟ ಬಂಟ್ವಾಳ ತಾಲೂಕಿನ ಇರಾ ಮತ್ತು ಕುರ್ನಾಡು ಸಮೀಪದ ಕೈಗಾರಿಕಾ ಪ್ರದೇಶ ಅಭಿವೃದ್ಧಿ ನಿಗಮ ನೀಡಿರುವ ಸುಮಾರು 64 ಎಕರೆ ಜಮೀನಿನಲ್ಲಿ  250 ಕೋ.ರೂ. ವೆಚ್ಚದಲ್ಲಿ 1000 ಕೈದಿಗಳಿಗೆ ವ್ಯವಸ್ಥೆಯ ಸುಸಜ್ಜಿತ ಕಾರಾಗೃಹ  ಮತ್ತು  ಸಮೀಪದಲ್ಲಿ ಅಧಿಕಾರಿಗಳ ವಸತಿಗೃಹ ನಿರ್ಮಾಣಕ್ಕೆ ಸರಕಾರ ಮುಂದಾಗಿದೆ. ಪ್ರಥಮ ಹಂತದಲ್ಲಿ 100 ಕೋಟಿ ವೆಚ್ಚದಲ್ಲಿ ಜೈಲು ನಿರ್ಮಾಣದ ಬಳಿಕ ಎರಡನೇ ಹಂತದಲ್ಲಿ ಅಧಿಕಾರಿಗಳ ವಸತಿಗೃಹ ನಿರ್ಮಾಣಕ್ಕೆಯೋಜನೆ ರೂಪಿಸಲಾಗಿದೆ.  ಕಾರಾಗೃಹ ಮತ್ತು ವಸತಿ ಸಮುಚ್ಚಯದ  ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆಯ ಹಂತದಲ್ಲಿದೆ ಎಂದು ಎಡಿಜಿಪಿ ಮೇಘರಿಕ್ ತಿಳಿಸಿದ್ದಾರೆ.

ಪೋಲೀಸ್ ಆಯುಕ್ತ ಟಿ.ಆರ್.ಸುರೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಮ್.ಲಕ್ಮೀ ಪ್ರಸಾದ್, ಡಿ.ಸಿ.ಪಿ.ಉಮಾ, ಎ.ಸಿ.ಪಿ.ಶ್ರೀನಿವಾಸ ಗೌಡ,ಬಂಟ್ವಾಳ ಎ.ಎಸ್.ಪಿ.ಸೈದುಲ್ ಅಡಾವತ್ , ಜಿಲ್ಲಾ ಕಾರಾಗೃಹ ಅಧೀಕ್ಷಕ ಚಂದನ್ , ಪಿ.ಡಬ್ಲೂ.ಡಿ. ಸ .ಕಾ. ಇಂಜಿನಿಯರ್ ಉಮೇಶ್ ಭಟ್, ಬಂಟ್ವಾಳ ಗ್ರಾಮಾಂತರ ಎಸ್.ಐ.ಪ್ರಸನ್ನ, ಇರಾ ಪಂ. ಅಧ್ಯಕ್ಷ  ಅಬ್ದುಲ್ ರಜಾಕ್ ಕುಕ್ಕಾಜೆ ಮತ್ತಿತರರು ಉಪಸ್ಥಿತರಿದ್ದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts