ಪ್ರವಾದಿ ನಿಂದನೆ ಮಾಡಿದ ಖಾಸಗಿ ಸುದ್ದಿವಾಹಿನಿಯ ನಿರೂಪಕ ಹಾಗೂ ಕಾರ್ಯಕ್ರಮ ವ್ಯವಸ್ಥಾಪಕರ ವಿರುದ್ಧ ಮತ್ತೊಮ್ಮೆ ತನಿಖೆ ನಡೆಸಿ, ಸೂಕ್ತ ಕಾನೂನು ಕೈಗೊಳ್ಳುವಂತೆ ಒತ್ತಾಯಿಸಿ ಫೆ. 8ರಂದು ಮಧ್ಯಾಹ್ನ 3ಗಂಟೆಗೆ ಮಂಗಳೂರಿನ ನೆಹರೂ ಮೈದಾನದಲ್ಲಿ ಬೃಹತ್ ಖಂಡನಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮುಸ್ಲಿಂ ಒಕ್ಕೂಟ ಬಂಟ್ವಾಳ ಅಧ್ಯಕ್ಷ ಕೆ.ಎಚ್.ಅಬೂಬಕರ್ ತಿಳಿಸಿದ್ದಾರೆ.
ಸೋಮವಾರ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಟ್ವಾಳ ಬ್ಯಾರಿ ಫೌಂಡೇಶನ್, ಮುಸ್ಲಿಂ ಸಮಾಜ ಬಂಟ್ವಾಳ, ಮುಸ್ಲಿಂ ಒಕ್ಕೂಟ ಬಂಟ್ವಾಳ, ಅಖಿಲ ಭಾರತ ಬ್ಯಾರಿ ಪರಿಷತ್ ಹಾಗೂ ದಫ್ ಅಸೋಸಿಯೇಶನ್, ಉಡುಪಿ ಮತ್ತು ದ.ಕ. ಜಿಲ್ಲೆ ಇದರ ನೇತೃತ್ವದಲ್ಲಿ ಈ ಖಂಡನಾ ಸಭೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರಾದ ಪಿ.ಎ.ರಹೀಂ, ಅಬೂಬಕರ್ ಪಲ್ಲಮಜಲು, ಇಕ್ಬಾಲ್ ಐಎಂಆರ್, ಅಬೂಬಕರ್ ಪಲ್ಲಮಜಲು, ಇಬ್ರಾಹಿಂ ಕೈಲಾರ್ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…