ಬಂಟ್ವಾಳ

ಸಂಚಾರ ಪೊಲೀಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ: ಮೇಲ್ಕಾರ್ ನಲ್ಲಿರುವ ಬಂಟ್ವಾಳ ಸಂಚಾರ ಪೋಲೀಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ 2019 ಕಾರ್ಯಕ್ರಮ ಕ್ಕೆ ಮೆಲ್ಕಾರ್ ನಲ್ಲಿ ಎ.ಎಸ್.ಪಿ.ಸೈದುಲು ಅಡಾವತ್ ಮಂಗಳವಾರ ಚಾಲನೆ ನೀಡಿದರು.

ಜಾಹೀರಾತು

ಈ ಸಂದರ್ಭ ಮೇಲ್ಕಾರಿನಿಂದ ಬಿ.ಸಿ.ರೋಡಿನವರೆಗೆ ಜಾಗೃತಿ ಮೂಡಿಸುವ ಸಲುವಾಗಿ ದ್ವಿಚಕ್ರ ವಾಹನ ಜಾಥಾ ನಡೆಯಿತು. ಬಳಿಕ ರಸ್ತೆ ಸುರಕ್ಷತೆ ಕುರಿತು ಬಿ.ಸಿ.ರೋಡಿನಲ್ಲಿ ಕಿರು ನಾಟಕ ನಡೆಯಿತು. ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್.ಹೆಗಡೆ, ಸಾರಿಗೆ ನಿರೀಕ್ಷಕ ಚರಣ್ , ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ಟ್ರಾಪಿಕ್ ಎಸ್.ಐ.ಮಂಜುಳಾ, ನಗರ ಠಾಣಾ ಎಸ್. ಐ.ಚಂದ್ರಶೇಖರ್, ಅಪರಾದ ವಿಭಾಗದ ಎಸ್.ಐ.ಹರೀಶ್, ಗ್ರಾಮಾಂತರ ಎಸ್.ಐ.ಪ್ರಸನ್ನ, ಟ್ರಾಫಿಕ್ ಪಿ.ಎಸ್. ಐ.ಮಹಮ್ಮದ್ ಕೆ ಮತ್ತು ಸಿಬ್ಬಂದಿ ಈ ಸಂದರ್ಭ ಉಪಸ್ಥಿತರಿದ್ದರು. ಬಿ.ಸಿ.ರೋಡಿನಲ್ಲಿ ಫ್ಲೈಓವರ್ ಬದಿಯಲ್ಲಿ ಟ್ರಾಫಿಕ್ ನಿಯಮ ಪಾಲನೆ ಕುರಿತು ದ್ವಿಚಕ್ರ ವಾಹನ ಸವಾರರಿಗೆ ಗುಲಾಬಿ ಹೂ ನೀಡಿ ಅರಿವು ಮೂಡಿಸಲಾಯಿತು. ಎಎಸ್ಐ ಬಾಲಕೃಷ್ಣ ಮತ್ತು ಸಿಬ್ಬಂದಿ ವಾಹನ ಸವಾರರನ್ನು ನಿಲ್ಲಿಸಿ ಅವರಿಗೆ ಮಾಹಿತಿಯನ್ನು ನೀಡಿದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ