ವಿಟ್ಲ

ಕುಂಡಡ್ಕ ಶ್ರೀ ವಿಷ್ಣಮೂರ್ತಿ ದೇವಸ್ಥಾನ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ವಿಟ್ಲ: ಭಗವಂತನ ಸೇವೆಯಲ್ಲಿ ಗ್ರಾಮದ ಪ್ರತಿಯೊಬ್ಬರೂ ಭಾಗವಹಿಸಿದ್ದು ಶ್ರೇಷ್ಟ ವಿಚಾರ ಎಂದು ಕಟಪಾಡಿ ವೇಣುಗಿರಿ ಆನೆಗುಂದಿ ಮಹಾಸಂಸ್ಥಾನ ಸರಸ್ವತೀಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳು ಹೇಳಿದರು.

ಜಾಹೀರಾತು


ಶುಕ್ರವಾರ ಕುಂಡಡ್ಕ ಶ್ರೀ ವಿಷ್ಣಮೂರ್ತಿ ದೇವಸ್ಥಾನ, ಮಾಡ ಶಿಬರಿಕಲ್ಲ ಶ್ರೀ ಮಲರಾಯ – ಮೂವರ್ ದೈವಂಗಳ ದೈವಸ್ಥಾನ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದರು.ಕರಿಂಜೆ ಓಂ ಶ್ರೀ ಶಕ್ತಿಗುರು ಮಠ ಶ್ರೀಕ್ಷೇತ್ರ ಶ್ರೀ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಹಿಂದೂ ಧರ್ಮ ಪ್ರತಿಯೊಬ್ಬರನ್ನೂ ಪ್ರೀತಿಸು ಎಂಬ ಸಂದೇಶವನ್ನು ಸಾರುತ್ತಿದೆ. ಎಂದು ತಿಳಿಸಿದರು.

ಮಂಗಳೂರು ಇಸ್ಕಾನ್ ಅಧ್ಯಕ್ಷ ಶ್ರೀ ಕಾರುಣ್ಯಸಾಗರದಾಸ ಪ್ರಭು ಮಾತನಾಡಿ ಜೀವನದಲ್ಲಿ ಎಲ್ಲವೂ ಭಗವಂತನ ಕೊಡುಗೆಯಾಗಿದೆ ಎಂದು ಹೇಳಿದರು.

ನಾಟಿ ವೈದ್ಯ ಬಾಲು ನಾಯ್ಕ ಕುಡುವರಬೆಟ್ಟು, ನಿವೃತ್ತ ಸೈನಿಕರಾದ ರಮೇಶ್ ಬಿ. ಕೆ. ಪಟ್ಲ, ಲಿಂಗಪ್ಪ ಗೌಡ ಆಲಂಗಾರು, ಕ್ರೀಡಾ ಕ್ಷೇತ್ರದ ಶ್ರೇಯಾ ಡಿ. ಶೆಟ್ಟಿ, ಶಿವಪ್ರಸಾದ್ ಭಟ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಅನುವಂಶಿಕ ಮೊಕ್ತೇಸರ ರತ್ನಾಕರ ರಾಜ ಕಿನ್ಯಕ್ಕ ಬಲ್ಲಾಳರು ವಹಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಚೌಟ ಮಾಣಿ, ಪುಣಚ ಶ್ರೀ ಮಹಿಷಮರ್ಧಿನಿ ದೇವಸ್ಥಾನ ಆಡಳಿತ ಮಂಡಳಿ ಕಾರ್ಯದರ್ಶಿ ಶ್ರೀಧರ ಶೆಟ್ಟಿ ದೇವರಗುಂಡಿ, ಶ್ರೀ ಕಾಳಿಕಾಂಭ ವಿನಾಯಕ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸದಾಶಿವ ಆಚಾರ್ಯ ವಿಟ್ಲ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ಕೊಂಕೋಡಿ, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ. ಎಂ. ಎಸ್. ಗೋವಿಂದೇ ಗೌಡ, ಬಂಟ್ವಾಳ ತಾಲೂಕು ಮಡಿವಾಳ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್. ಕೆ. ಶಿವ, ಸುಶ್ರುತ ಆಯುರ್ವೇದ ಆಸ್ಪತ್ರೆಯ ಡಾ. ರವಿಶಂಕರ್ ಪೆರ್ವಾಜೆ, ಡಾ. ಅಶೋಕ್ ಜಿ. ಕೆ., ಮಂಗಳೂರು ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದ ಸುಂದರ ಆಚಾರ್ಯ ಬೆಳುವಾಯಿ, ಯೋಗೀಶ್ ಕುಡ್ವ, ಕೆ. ಟಿ. ವೆಂಕಟೇಶ್ವರ ನೂಜಿ ಉಪಸ್ಥಿತರಿದ್ದರು.

ಜಾಹೀರಾತು

ತಿಮ್ಮಪ್ಪ ಮಂಜಪಾಲು ಸ್ವಾಗತಿಸಿದರು. ಹರೀಶ್ ಪೂಜಾರಿ ನೀರಕೋಡಿ ಪ್ರಸ್ತಾಪನೆಗೈದರು. ಶ್ರೀಪತಿ ನಾಯಕ್, ಸುಮಂತ್ ಆಳ್ವ ಪ್ರತಿಭಾಪುರಸ್ಕಾರ ನಡೆಸಿದರು. ನಾರಾಯಣ ಪೂಜಾರಿ ಎಸ್ ಕೆ., ಸುನೀತಾ ಅಡ್ಯಾಲು ಗೌರವಾರ್ಪಣೆ ನಡೆಸಿದರು. ನವೀನ್ ಮೂಡೈಮಾರು ವಂದಿಸಿದರು. ಪೂಜಾ ದರ್ಬೆ ಕಾರ್ಯಕ್ರಮ ನಿರೂಪಿದರು.

ಮಾತೃ ಸಮಾವೇಶ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವಿ ಮಾತಾನಂದಮಯೀ ಅವರ ದಿವ್ಯ ಉಪಸ್ಥಿತಿಯಲ್ಲಿ ಮಾತೃ ಸಮಾವೇಶ ನಡೆಯಿತು. ರಾಷ್ಟ್ರಸೇವಿಕಾ ಸಮಿತಿ ಪ್ರಾಂತ ಕಾರ್ಯಕಾರಿಣಿ ಸದಸ್ಯೆ ಕಮಲಾ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಿದ್ದರು. ಆಲಂಗಾರು ವರ್ಮುಡಿ ಪದ್ಮಿನಿ ರಾಮ ಭಟ್, ಅರಣ್ಯ ಇಲಾಖೆಯ ಶಶಿಕಲಾ ಶಿವಮೊಗ್ಗ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ