ವಿಟ್ಲ

ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ವಿಜಯಭಾರತಿ ಭಟ್ ಗೆ ಪದಕ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ವಿಟ್ಲ: ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೇಟ್, ಮ್ಯಾರಥಾನ್ ರನ್ನರ್, ವಿಟ್ಲ ನಿವಾಸಿ ವಿಜಯಭಾರತಿ ಯನ್ ಭಟ್ ಅವರು ಮಹಾರಾಷ್ಟ್ರದ ನಾಸಿಕ್‌ನ ಮೀನಾತಾಯಿ ಥಾಕ್ರೆ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 39ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೇಟಿಕ್ಸ್‌ನಲ್ಲಿ ವೇಗದ ನಡಿಗೆಯಲ್ಲಿ ಚಿನ್ನ, 500 ಮೀಟರ್ ಓಟದಲ್ಲಿ ಮತ್ತು ರಿಲೇಯಲ್ಲಿ ಬೆಳ್ಳಿ 10 ಸಾವಿರ ಮೀಟರ್ ಓಟದಲ್ಲಿ ಕಂಚು ಪದಕ ಪಡೆದುಕೊಂಡಿದ್ದಾರೆ.

ಸುಮಾರು ಎರಡು ಸಾವಿರದ ಐನೂರುಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದ ಈ ಕ್ರೀಡಾಕೂಟದಲ್ಲಿ ಭಾರತದ ವಿವಿಧ ರಾಜ್ಯಗಳಿಂದ ಸೇರಿದಂತೆ ಶ್ರೀಲಂಕಾ ದೇಶದಿಂದಲೂ ಕ್ರೀಡಾಪಟುಗಳು ಆಗಮಿಸಿದ್ದರು. 2017 ಮತ್ತು 18ರಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಮಲೆಶಿಯಾ ಮತ್ತು ಥಾಲ್ಯಾಂಡ್‌ನಲ್ಲಿ ಭಾಗವಹಿಸಿ ಮೂರು ಚಿನ್ನ ಹಾಗೂ ಮೂರು ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ವಿಟ್ಲ ವಿಠಲ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು, ವಿಟ್ಲ ಸಮೀಪದ ಕೆಲಿಂಜ ನಿವಾಸಿ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts