ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ವಿಟ್ಲ: ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೇಟ್, ಮ್ಯಾರಥಾನ್ ರನ್ನರ್, ವಿಟ್ಲ ನಿವಾಸಿ ವಿಜಯಭಾರತಿ ಯನ್ ಭಟ್ ಅವರು ಮಹಾರಾಷ್ಟ್ರದ ನಾಸಿಕ್‌ನ ಮೀನಾತಾಯಿ ಥಾಕ್ರೆ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 39ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೇಟಿಕ್ಸ್‌ನಲ್ಲಿ ವೇಗದ ನಡಿಗೆಯಲ್ಲಿ ಚಿನ್ನ, 500 ಮೀಟರ್ ಓಟದಲ್ಲಿ ಮತ್ತು ರಿಲೇಯಲ್ಲಿ ಬೆಳ್ಳಿ 10 ಸಾವಿರ ಮೀಟರ್ ಓಟದಲ್ಲಿ ಕಂಚು ಪದಕ ಪಡೆದುಕೊಂಡಿದ್ದಾರೆ.
ಸುಮಾರು ಎರಡು ಸಾವಿರದ ಐನೂರುಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದ ಈ ಕ್ರೀಡಾಕೂಟದಲ್ಲಿ ಭಾರತದ ವಿವಿಧ ರಾಜ್ಯಗಳಿಂದ ಸೇರಿದಂತೆ ಶ್ರೀಲಂಕಾ ದೇಶದಿಂದಲೂ ಕ್ರೀಡಾಪಟುಗಳು ಆಗಮಿಸಿದ್ದರು. 2017 ಮತ್ತು 18ರಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಮಲೆಶಿಯಾ ಮತ್ತು ಥಾಲ್ಯಾಂಡ್‌ನಲ್ಲಿ ಭಾಗವಹಿಸಿ ಮೂರು ಚಿನ್ನ ಹಾಗೂ ಮೂರು ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ವಿಟ್ಲ ವಿಠಲ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು, ವಿಟ್ಲ ಸಮೀಪದ ಕೆಲಿಂಜ ನಿವಾಸಿ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…