ಬಂಟ್ವಾಳ

ರೈತಸಂಘದ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸಾವಿರ ಪ್ರತಿನಿಧಿಗಳು

www.bantwalnews.com Editor: Harish Mambady

For Video of this news, Click here:

ಬಂಟ್ವಾಳ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ವಿಶ್ವ ರೈತ ಚೇತನ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರ ನೆನಪಿನ ದಿನಾಚರಣೆ ಅಂಗವಾಗಿ ಫೆ.13ರಂದು ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ವೈಚಾರಿಕ ಸಮಾವೇಶ ನಡೆಯಲಿದೆ. ಅಲ್ಲದೆ ದಿ.ಕೆ.ಎಸ್.ಪುಟ್ಟಣ್ಣಯ್ಯನವರ ಕಂಚಿನ ಪುತ್ಥಳಿಯನ್ನು ಮಂಡ್ಯ ಜಿಲ್ಲೆಯ ಪಾಂಡವಪುರ ಕ್ಯಾತನಹಳ್ಳಿಯಲ್ಲಿ ಫೆ.18ರಂದು ಲೋಕಾರ್ಪಣೆಗೊಳಿಸಲಾಗುತ್ತದೆ. ಎರಡೂ ಕಾರ್ಯಕ್ರಮಗಳಿಗೆ ದ.ಕ.ಜಿಲ್ಲೆಯಿಂದ ಸುಮಾರು 1 ಸಾವಿರ ರೈತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ರೈತಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಹೇಳಿದರು.

ಶುಕ್ರವಾರ ಸಂಜೆ ಬಂಟ್ವಾಳದ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ಬಜೆಟ್ ಅನ್ನು ಕಟುವಾಗಿ ಟೀಕಿಸಿದರು. ರಾಜ್ಯ ಸರಕಾರದ ಬಜೆಟ್ ರೈತರ ಹಿತದೃಷ್ಟಿಯಿಂದ ಚೆನ್ನಾಗಿದೆ ಎಂದು ಶ್ಲಾಘಿಸಿದ ಅವರು, ರೈತರಿಗೆ ಕೆಲವೊಂದು ಅನುಕೂಲಕರ ವಾತಾವರಣ ಕಲ್ಪಿಸಲಾಗಿದೆ ಎಂದರು. ಅಡಕೆ ಬೆಳೆಗಾರರಿಗೆ ನ್ಯಾಯೋಚಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ದ.ಕ.ಜಿಲ್ಲೆಯ ಶಾಸಕರು ಯಾವುದೇ ಪ್ರಯತ್ನ ನಡೆಸಿಲ್ಲ, ಅಂಕಿ ಅಂಶ ನೀಡಲೂ ಸೋತಿದ್ದಾರೆ ಎಂದು ಆರೋಪಿಸಿದ ಅವರು, ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿ ಜಿಲ್ಲೆಯ ಶಾಸಕರ ಬೆಂಬಲ ಏನೇನೂ ಸಾಲದು ಎತ್ತಿನಹೊಳೆ ಯೋಜನೆ ವಿರುದ್ಧ ಹೋರಾಟದಲ್ಲಿ ನಾವಿದ್ದೇವೆ, ದ.ಕ.ಜಿಲ್ಲೆಯ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರಸಾದ್ ಶೆಟ್ಟಿ ಪೆರಾಬೆ, ಸತೀಶ್ಚಂದ್ರ ರೈ, ದಿವಾಕರ ಪೂಜಾರಿ, ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡಿಸ್, ಪ್ರೇಮನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ