ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ: ಜೇಸಿ ಜೋಡುಮಾರ್ಗ ನೇತ್ರಾವತಿ ವತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಅಧ್ಯಯನ ತಂತ್ರ ಮತ್ತು ಪರೀಕ್ಷಾ ಸಿದ್ಧತೆ ವಿಷಯದ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲಾಯಿತು.
ಪರೀಕ್ಷೆಯನ್ನು ಎದುರಿಸಲು ಬೇಕಾಗುವ ಮನಸ್ಸಿನ ಏಕಾಗ್ರತೆ ಮತ್ತು ಜ್ಞಾಪಕ ಶಕ್ತಿಯನ್ನು ವೃದ್ಧಿಸಲು ಯಾವ ರೀತಿ ಮಕ್ಕಳು ತಯಾರಿ ನಡೆಸಬೇಕು ಹಾಗೂ ಇದಕ್ಕೆ ಪೂರಕವಾದ ವಾತಾವರಣವನ್ನು ಪೋಷಕರು ಮನೆಯಲ್ಲಿ ಮತ್ತು ಶಿಕ್ಷಕರು ಶಾಲೆಯಲ್ಲಿ ಯಾವ ರೀತಿ ನಿರ್ಮಾಣ ಮಾಡಬೇಕು ಎಂಬ ವಿಷಯದ ಬಗ್ಗೆ ತರಬೇತಿಯನ್ನು ವೃಷಭರಾಜ್ ಜೈನ್, ರಾಜ್ಯ ತರಬೇತುದಾರರು, ಹಲವಾರು ಉದಾಹರಣೆಗಳು ಮತ್ತು ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿಕೊಟ್ಟರು. ಅಧ್ಯಕ್ಷತೆಯನ್ನು ಜೇಸಿಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾದ ಹರ್ಷರಾಜ್ ಸಿ. ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿರುವ ಶಿವರಾಮಯ್ಯ, ಶಾಲೆಯ ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಜೇಸಿರೆಟ್ ಅಧ್ಯಕ್ಷೆ ಅಮಿತಾ ಹರ್ಷರಾಜ್, ಜೇಸಿಐ ಜೋಡುಮಾರ್ಗ ನೇತ್ರಾವತಿಯ ಉಪಾಧ್ಯಕ್ಷರುಗಳಾದ ಹರಿಪ್ರಸಾದ್ ಕುಲಾಲ್, ಜಯರಾಜ್ ಎಸ್. ಬಂಗೇರ, ಗಾಯತ್ರಿ ಲೋಕೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜೇಜೇಸಿ ಅಧ್ಯಕ್ಷ ರೋನಿತ್ ವಂದಿಸಿದರು.