ಬಂಟ್ವಾಳ

ಅಧ್ಯಯನ ತಂತ್ರ, ಪರೀಕ್ಷಾ ಸಿದ್ಧತೆ ಬಗ್ಗೆ ತರಬೇತಿ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ: ಜೇಸಿ ಜೋಡುಮಾರ್ಗ ನೇತ್ರಾವತಿ ವತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಅಧ್ಯಯನ ತಂತ್ರ ಮತ್ತು ಪರೀಕ್ಷಾ ಸಿದ್ಧತೆ ವಿಷಯದ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲಾಯಿತು.

ಪರೀಕ್ಷೆಯನ್ನು ಎದುರಿಸಲು ಬೇಕಾಗುವ ಮನಸ್ಸಿನ ಏಕಾಗ್ರತೆ ಮತ್ತು ಜ್ಞಾಪಕ ಶಕ್ತಿಯನ್ನು ವೃದ್ಧಿಸಲು ಯಾವ ರೀತಿ ಮಕ್ಕಳು ತಯಾರಿ ನಡೆಸಬೇಕು ಹಾಗೂ ಇದಕ್ಕೆ ಪೂರಕವಾದ ವಾತಾವರಣವನ್ನು ಪೋಷಕರು ಮನೆಯಲ್ಲಿ ಮತ್ತು ಶಿಕ್ಷಕರು ಶಾಲೆಯಲ್ಲಿ ಯಾವ ರೀತಿ ನಿರ್ಮಾಣ ಮಾಡಬೇಕು ಎಂಬ ವಿಷಯದ ಬಗ್ಗೆ ತರಬೇತಿಯನ್ನು ವೃಷಭರಾಜ್ ಜೈನ್, ರಾಜ್ಯ ತರಬೇತುದಾರರು,  ಹಲವಾರು ಉದಾಹರಣೆಗಳು ಮತ್ತು ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿಕೊಟ್ಟರು. ಅಧ್ಯಕ್ಷತೆಯನ್ನು ಜೇಸಿಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾದ ಹರ್ಷರಾಜ್ ಸಿ. ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿರುವ ಶಿವರಾಮಯ್ಯ, ಶಾಲೆಯ ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಜೇಸಿರೆಟ್ ಅಧ್ಯಕ್ಷೆ ಅಮಿತಾ ಹರ್ಷರಾಜ್, ಜೇಸಿಐ ಜೋಡುಮಾರ್ಗ ನೇತ್ರಾವತಿಯ ಉಪಾಧ್ಯಕ್ಷರುಗಳಾದ ಹರಿಪ್ರಸಾದ್ ಕುಲಾಲ್, ಜಯರಾಜ್ ಎಸ್. ಬಂಗೇರ, ಗಾಯತ್ರಿ ಲೋಕೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜೇಜೇಸಿ ಅಧ್ಯಕ್ಷ ರೋನಿತ್ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ