ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ: ಸವಿತಾ ಸಮಾಜದವರು ತಮಗೆ ದೈವದತ್ತವಾಗಿ ನೀಡಲಾದ ಆಯುಷ್ಕರ್ಮ, ಧನ್ವಂತರಿ ಮತ್ತು ಸಂಗೀತದ ಸೇವೆಗಳನ್ನು ಅತ್ಯಂತ ನಿಷ್ಠೆಯಿಂದ ನಿರ್ವಹಿಸಿ ಸಮಾಜವನ್ನು ಬೆಳಗಿಸುತ್ತಿದ್ದಾರೆ ಎಂದು ಬಂಟ್ವಾಳ ತಹಶೀಲ್ದಾರ್ ಹಾಗೂ ತಾಲೂಕು ಕಾರ್ಯನಿರ್ವಹಕ ದಂಡಾಧಿಕಾರಿ ರಶ್ಮಿ ಎಸ್. ಆರ್. ಹೇಳಿದರು.
ಮಿನಿ ವಿಧಾನಸೌಧ ಸಭಾಂಗಣದಲ್ಲಿ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಬಂಟ್ವಾಳ ತಾಲೂಕು ಮಟ್ಟದ ಶ್ರೀ ಸವಿತಾ ಮಹರ್ಷಿ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸೇವೆ ಸಲ್ಲಿಸುವ ಮನೋಭಾವವೇ ನಿಜವಾದ ದೇವರ ಸೇವೆ. ಈ ನಿಟ್ಟಿನಲ್ಲಿ ಮಹರ್ಷಿಗಳ ಜೀವನ ಸಂದೇಶ ನಮಗೆ ಆದರ್ಶವಾಗಬೇಕು ಎಂದವರು ತಿಳಿಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸವಿತಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಿಶ್ವನಾಥ್ ಬಂಟ್ವಾಳ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸವಿತಾ ಸಮಾಜದ ಕಾರ್ಯದರ್ಶಿ ಹರೀಶ್, ಇರಾ ಗ್ರಾ.ಪಂ. ಅಧ್ಯಕ್ಷ ರಝಾಕ್ ಕುಕ್ಕಾಜೆ, ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಪ್ರಬಾರ ಉಪತಹಶೀಲ್ದಾರ್ ಗ್ರೆಟ್ಟಾ ಮಸ್ಕರೇಂಜಸ್, ಆಹಾರ ನಿರೀಕ್ಷಕ ಶ್ರೀನಿವಾಸ್, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ವಿಟ್ಲ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿಯ ಸಿಬ್ಬಂದಿಗಳು, ಗ್ರಾಮಕರಣಿಕರು, ಗ್ರಾಮ ಸಹಾಯಕರು, ಸವಿತಾ ಸಮಾಜದ ಸದಸ್ಯರು, ವೃತ್ತಿ ಬಾಂಧವರು ಉಪಸ್ಥಿತರಿದ್ದರು.
ಸವಿತಾ ಮಹರ್ಷಿಯವರ ಜೀವನ ಮೌಲ್ಯ ಹಾಗೂ ಸವಿತಾ ಸಮಾಜ ನಡೆದು ಬಂದ ದಾರಿಯ ಕುರಿತು ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಉಪನ್ಯಾಸಕ ಸುರೇಶ್ ನಂದೊಟ್ಟು ವಿಶೇಷ ಉಪನ್ಯಾಸ ನೀಡಿದರು. ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿದರು.
Be the first to comment on "ಬಂಟ್ವಾಳ ತಾಲೂಕು ಮಟ್ಟದ ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆ"