ಯಕ್ಷಗಾನ

ಆರಾಧನಾ ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ: ಇಲ್ಲಿನ ಬೈಪಾಸ್ ಆರಾಧನಾ  ಫ್ರೆಂಡ್ಸ್ ಸರ್ಕಲ್ ಇದರ ೩೧ನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಯಕ್ಷಗಾನ ಬಯಲಾಟ ಹಾಗೂ ಆರಾಧನಾ ಪ್ರಶಸ್ತಿ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬಂಟ್ವಾಳದಲ್ಲಿ ನಡೆಯಿತು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ತೆಂಕುತಿಟ್ಟಿನ ಹಿರಿಯ ಹಾಸ್ಯ ಕಲಾವಿದ ಸೀತಾರಾಮ ಕುಮಾರ್ ಕಟೀಲು ಅವರಿಗೆ ಯಕ್ಷಗಾನ ಪೋಷಕ ದಿ. ಮರಿಯಪ್ಪಯ್ಯ ಹೊಳ್ಳ ಕಳ್ಳಿಮಾರು ಅವರ ಸ್ಮರಣಾರ್ಥ ಆರಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಿವೃತ್ತ ಪ್ರಾದ್ಯಾಪಕ ಡಾ| ಶಿವರಾಮ ಹೊಳ್ಳ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಹಿರಿಯ ಕಲಾವಿದರನ್ನು ಗುರುತಿಸಿ ಗೌರವಿಸುವುದರಿಂದ ಅವರ ಕಲಾಸೇವೆಗೆ ಮತ್ತಷ್ಟು ಉತ್ತೇಜನ ನೀಡಿದಂತಾಗುತ್ತದೆ. ಕಿರಿಯ ಕಲಾವಿದರಿಗೆ ಮುಂದಕ್ಕೆ ಬರಲು ಪ್ರೇರಣೆಯಾಗುತ್ತದೆ. ವರ್ಷಂಪ್ರತಿ ಪ್ರಶಸ್ತಿ ನೀಡುವ ಮೂಲಕ ಆರಾಧನಾ ಫ್ರೆಂಡ್ಸ್ ಸರ್ಕಲ್ ಉತ್ತಮ ಕಾರ್ಯ ನಡೆಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಎಸೆಸ್ಸೆಲ್ಸಿಯಲ್ಲಿ  ಎಸ್‌ವಿಎಸ್ ವಿದ್ಯಾಗಿರಿ ಶಾಲೆಗೆ ಪ್ರಥಮ ಸ್ಥಾನಿಯಾದ ವಿಧಾತ್ರಿ ಸೋಮಯಾಜಿ ಅವರಿಗೆ ಪ್ರತಿಭಾ ಪುರಸ್ಕಾರ, ಸಮ್ಮಾನ ನಡೆಸಲಾಯಿತು.

ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ವಿಶ್ವನಾಥ ಎ., ನಿವೃತ್ತ ಸೇನಾಆiಕಾರಿ ಗಣಪತಿ ಸೋಮಯಾಜಿ, ಫ್ರೆಂಡ್ಸ್ ಸರ್ಕಲ್ ಪದಾಽಕಾರಿಗಳಾದ ನರೇಶ್ ಕುಮಾರ್ ಕಳ್ಳಿಮಾರ್, ಗಣೇಶ್, ಯೋಗೀಶ್, ಪ್ರಕಾಶ್, ಪೃಥ್ವಿರಾಜ್, ಸಂಜೀವ ಕೊಟ್ಟಾರಿ, ರಾಮಚಂದ್ರ ಮಯ್ಯ, ಸುರೇಶ್ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕ ಪರಮೇಶ್ವರ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.