ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ:ಜಮ್ಮು ಕಾಶ್ಮೀರದಲ್ಲಿ ನಡೆದ ಯೋಧರ ಹತ್ಯೆಯನ್ನು ಬಂಟ್ವಾಳ ಕಾಂಗ್ರೆಸ್ ಖಂಡಿಸಿದ್ದು, ಯೋಧರ ಆತ್ಮಕ್ಕೆ ಶಾಂತಿ ಕೋರಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ.ರೋಡಿನ ಫ್ಲೈ ಓವರ್ ಅಡಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ.ಎಸ್. ಮುಹಮ್ಮದ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್‌ಕುಮಾರ್ ಶೆಟ್ಟಿ, ಪ್ರಶಾಂತ್ ಕುಲಾಲ್, ಮಾಯಿಲಪ್ಪ ಸಾಲ್ಯಾನ್, ಮಾಧವ ಮಾವೆ, ವಾಸುಪೂಜಾರಿ, ಮದುಸೂಧನ್, ಸಿದ್ದೀಕ್ ಸರವು, ಸಿದ್ದೀಕ್ ಗುಡ್ಡೆಯಂಗಡಿ, ಲೊಕೇಶ್ ಸುವರ್ಣ, ಚಂದ್ರಶೇಖರ ಪೂಜಾರಿ ಹಾಜರಿದ್ದರು.
ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಅಶ್ರುತರ್ಪಣ ಸಲ್ಲಿಸುವ ಮುಖಾಂತರ ಈ ದಾಳಿಯನ್ನು ತೀವ್ರವಾಗಿ ಖಂಡಿಸಿ ಹುತಾತ್ಮರಾದವರ ಕುಟುಂಬದವರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಈ ಸಂದರ್ಭ ರಮಾನಾಥ ರೈ ಹೇಳಿದರು.