ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ:ಮಂಚಿ ಕೊಳ್ನಾಡಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಫೆ.20ರಿಂದ 26ರವರೆಗೆ ಪ್ರತಿದಿನ ಸಂಜೆ 7ರಿಂದ 8.30ರವರೆಗೆ ಶ್ರೀಮದ್ ಭಾಗವತ ಸಪ್ತಾಹ ಕಾರ್ಯಕ್ರಮ ನಡೆಯಲಿದೆ. 20ರಂದು ಉದ್ಘಾಟನೆ ಸಮಾರಂಭ ನಡೆಯಲಿದ್ದು, ಧಾರ್ಮಿಕ ಪರಿಷತ್ತಿನ ಜಗನ್ನಾಥ ಚೌಟ ದೀಪಪ್ರಜ್ವಲನ ಮಾಡುವರು. ನಿವೃತ್ತ ಪ್ರಾಂಶುಪಾಲ ವೇದವ್ಯಾಸ ರಾಮಕುಂಜ ಅಧ್ಯಕ್ಷತೆ ವಹಿಸುವರು. ಕರ್ನೂಲಿನ ರಾಮಕುಂಜ ಶ್ರೀಕೃಷ್ಣ ಭಟ್ ಪ್ರವಚನ ನೀಡಲಿದ್ದಾರೆ ಎಂದು ಸಂಘಟಕ ಕೈಯೂರು ನಾರಾಯಣ ಭಟ್ ತಿಳಿಸಿದರು.
ಬಿ.ಸಿ.ರೋಡಿನ ಹೋಟೆಲ್ ರಂಗೋಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾಜಿ ಸಚಿವರಾದ ಬಿ.ರಮಾನಾಥ ರೈ, ಬಿ.ನಾಗರಾಜ ಶೆಟ್ಟಿ. ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ, ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಮಂಜುನಾಥ ಭಂಡಾರಿ ಮೂಡುಶೆಡ್ಡೆ, ಬಿಜೆಪಿ ಜಿಲ್ಲಾ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್, ರಾಜ್ಯ ಬಾಲಭವನ ಸೊಸೈಟಿ ಮಾಜಿ ಅಧ್ಯಕ್ಷೆ ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಬಿಲ್ಲವ ಮುಖಂಡ ರಾಮದಾಸ್ ಕೋಟ್ಯಾನ್, ಉದ್ಯಮಿ ಭುವನೇಶ ಪಚ್ಚಿನಡ್ಕ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ದಿನೇಶ ಅಮ್ಟೂರು, ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ, ಕುಲಾಲ ಸಮಾಜ ಸುಧಾರಕ ಸಂಘದ ಅಧ್ಯಕ್ಷ ಡಿ.ಎಂ.ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.