ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ: ಬಂಟ್ವಾಳದ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕಾಶ್ಮೀರದಲ್ಲಿ ಆತ್ಮಾಹುತಿ ದಾಳಿಗೆ ಬಲಿಯಾದ ಸಿಆರ್‌ಪಿಎಫ್ ಯೋಧರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಹೊಟೇಲ್ ಸಿಲ್ವರ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಮೇಶ್ ನಾಯಕ್ ರಾಯಿ, ನ್ಯಾಯವಾದಿ ಅಶ್ವನಿ ಕುಮಾರ್ ರೈ, ನಿವೃತ್ತ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್, ಸುರೇಶ್ ನಂದೊಟ್ಟು, ಪತ್ರಕರ್ತ ಸಂದೀಪ್ ಸಾಲ್ಯಾನ್, ಉದ್ಯಮಿ ವಿಶ್ವನಾಥ ಬಂಟ್ವಾಳ್, ಉಪನ್ಯಾಸಕ ವಿ.ಸು. ಭಟ್, ಪ್ರಮುಖರಾದ ಪಿ.ಎ,ರಹೀಂ, ಕೆ.ಎಚ್.ಅಬೂಬಕ್ಕರ್, ಅಂಚೆ ವಿತರಕಿ ಮಮತಾ, ಜಯಲಕ್ಷ್ಮಿ ನುಡಿನಮನ ಸಲ್ಲಿಸಿದರು. ಸುಂದರ್‌ರಾವ್ ಮತ್ತಿತರರು ಹಾಜರಿದ್ದರು.