ಓದುವ ಹವ್ಯಾಸ: ಬಂಟ್ವಾಳದಲ್ಲಿ ಕಾರ್ಯಾಗಾರ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ: ಗ್ರಂಥಾಲಯಗಳಲ್ಲಿರುವ ಪುಸ್ತಕಗಳನ್ನು ಓದುವ ಮೂಲಕ ವಿದ್ಯಾರ್ಥಿಗಳು ಜ್ಞಾನಮುಖಿಗಳಾಗಬಹುದು ಎಂದು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ರಾಮ ಕೆ. ಹೇಳಿದ್ದಾರೆ.

ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ವಿಭಾಗ ಮತ್ತು ಸಾಹಿತ್ಯ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಓದುವ ಹವ್ಯಾಸ ಕುರಿತ ಕಾರ್ಯಗಾರದಲ್ಲಿ ಮಾತನಾಡಿದರು.

ಆಧುನಿಕ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಪರಾಮರ್ಶನ ಗ್ರಂಥಗಳಿಗೆ ಬಹಳ ಮಹತ್ವವಿದೆ.  ಪಠ್ಯಕ್ಕೆ ನೇರವಾಗಿ ಸಂಬಂಧ ಪಡದಿದ್ದರೂ ಜ್ಞಾನರ್ಜನೆಗಾಗಿ ಓದಬೇಕಾದ ಪುಸ್ತಕಗಳು ದಿನನಿತ್ಯ ಪ್ರಕಟವಾಗುತ್ತಿವೆ. ಗ್ರಂಥಾಲಯದಲ್ಲಿರುವ ಪುಸ್ತಕಗಳನ್ನು ಓದುವ ಮೂಲಕ ವಿದ್ಯಾರ್ಥಿಗಳು ಜ್ಞಾನಮುಖಿ ವ್ಯಕ್ತಿತ್ವ ರೂಢಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಬೆಳಂದೂರು ಸರಕಾರಿ ಪ್ರಥಮದರ್ಜೆಕಾಲೇಜಿನ ಗ್ರಂಥಪಾಲಕ ಡಾ. ರವಿಚಂದ್ರ ನಾಯಕ್ ಮಾತನಾಡಿ ಅಂತರ್ಜಾಲದಲ್ಲಿ ಲಭ್ಯವಿರಿರುವ ಪುಸ್ತಕಗಳನ್ನು ಬಳಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಉಚಿತವಾಗಿ ಮಾಹಿತಿಯನ್ನು ಪಡೆಯಬಹುದು ಎಂದು ತಿಳಿಸಿದರು.

ಇತಿಹಾಸ ವಿಬಾಗದ ಮುಖ್ಯಸ್ಥ ಪ್ರೊ. ಸತೀಶ್ಗಟ್ಟಿ ಅಧ್ಯಕ್ಷತೆ ವಹಿಸಿದರು. ಕಾಲೇಜಿನ ಗ್ರಂಥಪಾಲಕ ಪುಟ್ಟೇಗೌಡ ಹೆಚ್ ಸಿ ಕಾರ್ಯಕ್ರಮ ಸಂಯೋಜಿಸಿದರು. ಸುಶ್ಮಿತಾ ಸ್ವಾಗತಿಸಿ, ಮಮತಾ ಕಾರ್ಯಕ್ರಮ ನಿರೂಪಿಸಿದರು, ಶಿಲ್ಪ ವಂದಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಓದುವ ಹವ್ಯಾಸ: ಬಂಟ್ವಾಳದಲ್ಲಿ ಕಾರ್ಯಾಗಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*