ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ: ಗ್ರಂಥಾಲಯಗಳಲ್ಲಿರುವ ಪುಸ್ತಕಗಳನ್ನು ಓದುವ ಮೂಲಕ ವಿದ್ಯಾರ್ಥಿಗಳು ಜ್ಞಾನಮುಖಿಗಳಾಗಬಹುದು ಎಂದು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ರಾಮ ಕೆ. ಹೇಳಿದ್ದಾರೆ.
ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ವಿಭಾಗ ಮತ್ತು ಸಾಹಿತ್ಯ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಓದುವ ಹವ್ಯಾಸ ಕುರಿತ ಕಾರ್ಯಗಾರದಲ್ಲಿ ಮಾತನಾಡಿದರು.
ಆಧುನಿಕ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಪರಾಮರ್ಶನ ಗ್ರಂಥಗಳಿಗೆ ಬಹಳ ಮಹತ್ವವಿದೆ. ಪಠ್ಯಕ್ಕೆ ನೇರವಾಗಿ ಸಂಬಂಧ ಪಡದಿದ್ದರೂ ಜ್ಞಾನರ್ಜನೆಗಾಗಿ ಓದಬೇಕಾದ ಪುಸ್ತಕಗಳು ದಿನನಿತ್ಯ ಪ್ರಕಟವಾಗುತ್ತಿವೆ. ಗ್ರಂಥಾಲಯದಲ್ಲಿರುವ ಪುಸ್ತಕಗಳನ್ನು ಓದುವ ಮೂಲಕ ವಿದ್ಯಾರ್ಥಿಗಳು ಜ್ಞಾನಮುಖಿ ವ್ಯಕ್ತಿತ್ವ ರೂಢಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಬೆಳಂದೂರು ಸರಕಾರಿ ಪ್ರಥಮದರ್ಜೆಕಾಲೇಜಿನ ಗ್ರಂಥಪಾಲಕ ಡಾ. ರವಿಚಂದ್ರ ನಾಯಕ್ ಮಾತನಾಡಿ ಅಂತರ್ಜಾಲದಲ್ಲಿ ಲಭ್ಯವಿರಿರುವ ಪುಸ್ತಕಗಳನ್ನು ಬಳಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಉಚಿತವಾಗಿ ಮಾಹಿತಿಯನ್ನು ಪಡೆಯಬಹುದು ಎಂದು ತಿಳಿಸಿದರು.
ಇತಿಹಾಸ ವಿಬಾಗದ ಮುಖ್ಯಸ್ಥ ಪ್ರೊ. ಸತೀಶ್ ಗಟ್ಟಿ ಅಧ್ಯಕ್ಷತೆ ವಹಿಸಿದರು. ಕಾಲೇಜಿನ ಗ್ರಂಥಪಾಲಕ ಪುಟ್ಟೇಗೌಡ ಹೆಚ್ ಸಿ ಕಾರ್ಯಕ್ರಮ ಸಂಯೋಜಿಸಿದರು. ಸುಶ್ಮಿತಾ ಸ್ವಾಗತಿಸಿ, ಮಮತಾ ಕಾರ್ಯಕ್ರಮ ನಿರೂಪಿಸಿದರು, ಶಿಲ್ಪ ವಂದಿಸಿದರು.