ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘ ಹಾಗೂ ಕುಲಾಲ ಕುಂಬಾರರ ಯುವ ವೇದಿಕೆಯ ವತಿಯಿಂದ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಧಾಳಿಗೆ ತುತ್ತಾದ ಸಿ ಆರ್ ಪಿ ಎಫ್ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಹಣತೆ ಹಚ್ಚಿ ಸಲ್ಲಿಸಲಾಯಿತು. ನಿವೃತ್ತ ಯೋಧ ಬಾಲಚಂದ್ರ ರವರು ಭಯೋತ್ಪಾದಕರ ಅಮಾನುಷ ಕೃತ್ಯವನ್ನು ಖಂಡಿಸಿ ವೀರ ಯೋಧರ ಆತ್ಮಕ್ಕೆ ಶಾಂತಿ ಕೋರಿದರು. ಬಂಟ್ವಾಳ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಡಿ ಎಂ ಕುಲಾಲ್, ಕರ್ನಾಟಕ ರಾಜ್ಯ ಕುಂಬಾರ ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಶೇಷಪ್ಪ ಮಾಸ್ಟರ್ ನುಡಿ ನಮನ ಸಲ್ಲಿಸಿದರು. ಶ್ರೃಧ್ಧಾಂಜಲಿ ಸಭೆ ಯಲ್ಲಿ ಬಂಟ್ವಾಳ ತಾಲೂಕು ಕುಂಬಾರ ಯುವ ವೇದಿಕೆ ಅಧ್ಯಕ್ಷ ಸುಕುಮಾರ್ ಬಂಟ್ವಾಳ ಕರ್ನಾಟಕ ರಾಜ್ಯ ಕುಂಬಾರ ಮಹಿಳಾ ಸಂಘ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷೆ ಭಾರತಿ ಶೇಷಪ್ಪ, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಉಪಾಧ್ಯಕ್ಷ ಕೃಷ್ಣ ಶ್ಯಾಂ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ನಮಿತಾ, ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಓಬಯ್ಯ ಮೂಲ್ಯ ಭಾಗವಹಿಸಿದ್ದರು.