Categories: ಬಂಟ್ವಾಳ

ಲೋಕಸಭೆ ಚುನಾವಣೆ: ಕಾಂಗ್ರೆಸ್ ನಿಂದ ಸಿದ್ಧತಾ ಸಭೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ವತಿಯಿಂದ ಬಂಟ್ವಾಳದ ಅಗ್ರಾರ್ ನಲ್ಲಿ ಮಂಗಳವಾರ ಸಿದ್ಧತಾ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಸಚಿವ ಬಿ.ರಮಾನಾಥ ರೈ, ಕಾಂಗ್ರೆಸ್ ಪಕ್ಷ ಎನ್ನುವುದು ಸಾಗರ ಇದ್ದ ಹಾಗೆ, ಕಾಂಗ್ರೆಸ್ ಪಕ್ಷ ಜನಸೇವೆ ಹಾಗೂ ಸಾಮಾಜಿಕ ನ್ಯಾಯವನ್ನು ನೀಡುವ ಮೂಲಕ ಗುರುತಿಸಿಕೊಂಡಿದೆ. ದುರ್ಬಲ ವರ್ಗದವರ, ಹಿಂದುಳಿದವರ ಅಭಿವೃದ್ಧಿಗೆ ಶ್ರಮಿಸಿ ಪ್ರಾಣತ್ಯಾಗ ಮಾಡಿದ ಪಕ್ಷ ಇದ್ದರೆ ಅದು ಕಾಂಗ್ರೆಸ್ ಪಕ್ಷ ಎಂದರು.

ತರಬೇತುದಾರರಾಗಿ ಭಾಗವಹಿಸಿದ ಮಾಜಿ ಶಾಸಕ ಯು ಆರ್ ಸಭಾಪತಿ, ಕಾಂಗ್ರೆಸ್ ಪಕ್ಷವನ್ನು ಸೋಲಿಸಲಿಕ್ಕಾಗಿ ಬಿಜೆಪಿ ಸಮಾಜದಲ್ಲಿ ಆಘಾತಕಾರಿ ವಾತಾವರಣವನ್ನು ಸೃಷ್ಟಿಸುತ್ತಿದೆ.ಇವೆಲ್ಲವೂ ಕೂಡಾ ಶಾಶ್ವತವಲ್ಲ. ಬಿಜೆಪಿಯವರ ಮೋಸ ಮುಂದೆ ಜನರಿಗೆ ಅರ್ಥವಾಗಲಿದೆ ಎಂದರು.

ತರಬೇತುದಾರರಾಗಿ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಸಬಿತಾ ಮಿಸ್ಕಿತ್, ಉಡುಪಿ ತಾಲೂಕು ಪಂಚಾಯತ್ ಸದಸ್ಯರಾದ ದಿನೇಶ್ ಕೋಟ್ಯಾನ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಭಾಗವಹಿದ್ದರು.

ಕೆಪಿಸಿಸಿ ಕಾರ್ಯದರ್ಶಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಸವಿತಾ ರಮೇಶ್, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ. ಎಸ್ ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಬ್ಬಾಸ್ ಆಲಿ ಉಪಸ್ಥಿತರಿದ್ದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸ್ವಾಗತಿಸಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

19 hours ago