Categories: ಬಂಟ್ವಾಳ

ಬಂಟ್ವಾಳ ತಾಲೂಕು ಮಟ್ಟದ ಶಿವಾಜಿ ಜಯಂತಿ ಆಚರಣೆ

ಬಂಟ್ವಾಳ ತಾಲೂಕು ಮಟ್ಟದ ಶಿವಾಜಿ ಜಯಂತಿ ಆಚರಣೆ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಂಗಳವಾರ ನಡೆಯಿತು.

ಜಾಹೀರಾತು

ಶಿವಾಜಿ ಜೀವನ ಸಾಧನೆ ನಮ್ಮ ಜೀವನಕ್ಕೆ ಸ್ಪೂರ್ತಿಯಾಗಿದೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಉಪತಹಶೀಲ್ದಾರ್ ರಾಜೇಶ್ ನಾಯ್ಕ್ ಹೇಳಿದರು. ಧೈರ್ಯ ಸಹನೆ ಮುಂತಾದ ಆಧ್ಯಾತ್ಮಿಕ ಗುಣಗಳ ಬಲದಲ್ಲಿ ರಾಜ್ಯ ಸ್ಥಾಪನೆ ಮಾಡಿದ ಶಿವಾಜಿ ಮರಾಠರಲ್ಲಿ ಧೈರ್ಯ ತುಂಬಿ ಆದರ್ಶ ರಾಜನಾದನು, ಶಕ್ತಿ ಮತ್ತು ಯುಕ್ತಿಗಳು ಇದ್ದಲ್ಲಿ ವಿರೋಧಿಗಳು ಪ್ರಬಲರಾಗಿದ್ದರೂ ಧೈರ್ಯದಿಂದ ಎದುರಿಸಿ

ಸೋಲಿಸ ಬಹುದೆಂಬುವುದಕ್ಕೆ ಛತ್ರಪತಿ ಶಿವಾಜಿ ಮಾದರಿಯಾಗಿದ್ದಾರೆ ಎಂದು ಅವರು ಹೇಳಿದರು.

ಪ್ರಥಮ ದರ್ಜೆ ಸಹಾಯಕ ಪ್ರಸನ್ನ ಪಕ್ಕಳ ಶಿವಾಜಿಯವರ ಜೀವನ ಸಂದೇಶವನ್ನು ವಿವರಿಸಿದರು. ತಾಲೂಕು  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶು ಕುಮಾರ್, ತಾಲೂಕು ಕಚೇರಿ ಸಿಬಂದಿ, ಗ್ರಾಮ ಕರಣಿಕರು, ಗ್ರಾಮ ಸಹಾಯಕರು, ಸಾರ್ವಜನಿಕರು ಉಪಸ್ಥಿತರಿದ್ದರು, ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ ಸ್ವಾಗತಿಸಿ, ದ್ವಿತೀಯ ದರ್ಜೆ ಸಹಾಯಕಿ ಶ್ವೇತ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ