Categories: ಬಂಟ್ವಾಳ

23ರಂದು ಕುಲಾಲ ಸಮುದಾಯ ಭವನದಲ್ಲಿ ಡಾ. ಬಾಳಪ್ಪ ಜನ್ಮದಿನಾಚರಣೆ

ಬಂಟ್ವಾಳ: ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ ಬಂಟ್ವಾಳ, ಕುಲಾಲ ಎಜ್ಯುಕೇಷನ್ ಟ್ರಸ್ಟ್ ಬಂಟ್ವಾಳ, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಹಾಗೂ ಕರಾವಳಿ ಕುಲಾಲ ಕುಂಬರರ ಯುವ ವೇದಿಕೆ ಬಂಟ್ವಾಳ ಇದರ ಸಹಯೋಗದಲ್ಲಿ ಡಾ. ಅಮ್ಮೆಂಬಳ ಬಾಳಪ್ಪ ಅವರ ೯೭ನೇ ಜನ್ಮದಿನಾಚರಣೆ ಅಂಗವಾಗಿ ವಿದ್ಯಾರ್ಥಿ ವೇತನ ವಿತರಣ ಸಮಾರಮಭ ಫೆ.23ರಂದು ಶನಿವಾರ ಬೆಳಿಗ್ಗೆ ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ.


ಹಿರಿಯ ಪತ್ರಕರ್ತ ಅಮ್ಮೆಂಬಳ ಆನಂದ ಅಧ್ಯಕ್ಷತೆ ವಹಿಸಲಿದ್ದಾರೆ, ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಳೇಜಿನ ಉಪನ್ಯಾಸಕ ದಾಮೋದರ ಇ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ, ಕುಲಾಲ ಎಜ್ಯುಕೇಷನ್ ಟ್ರಸ್ಟ್‌ನ ಆಡಳಿತ ಟ್ರಸ್ಟಿ ಪಿ.ಕೃಷ್ಣದಾಸ್, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಡಿ.ಎಂ.ಕುಲಾಲ್, ಕುಲಾಲ ಯುವ ವೇದಿಕೆಯ ಅಧ್ಯಕ್ಷ ಸುಕುಮಾರ್ ಬಂಟ್ವಾಳ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

17 hours ago