Categories: ಬಂಟ್ವಾಳ

ಬಂಟ್ವಾಳ ಕ್ಷೇತ್ರ ಬಿಜೆಪಿ ಶಕ್ತಿಕೇಂದ್ರ ಸಭೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ: ಬಂಟ್ವಾಳ ಕ್ಷೇತ್ರ ಬಿಜೆಪಿ ಶಕ್ತಿ  ಕೇಂದ್ರ ಪ್ರಭಾರಿ ಮತ್ತು ಪ್ರಮುಖರ ಸಭೆಯು  ಬಿ.ಸಿ.ರೋಡಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ  ನಡೆಯಿತು.

ಜಾಹೀರಾತು

ಬಂಟ್ವಾಳ ತಾಲೂಕು ಚುನಾವಣಾ ಸಂಚಾಲಕ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆ ಮಹತ್ವದ ಚುನಾವಣೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿದೆ ಎಂದರು.

ಕಾಂಗ್ರೆಸ್ ಮತ್ತು ಇತರೆ ಪಕ್ಷಗಳು ಮೋದಿ ಅವರನ್ನು ಸೋಲಿಸಲು ಒಂದಾಗುತ್ತಿದೆ. ದೇಶದಲ್ಲಿ ಸ್ವಚ್ಚ ಆಡಳಿತ ನೀಡಿದ ಸರಕಾರವಿದ್ದರೆ,ಅದು ನರೇಂದ್ರ ಮೋದಿ ನೇತೃತ್ವದ ಸರಕಾರ ಮಾತ್ರ ಎಂದ ಅವರು,ಕೇಂದ್ರದ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸಬೇಕು ,ದೇಶಕ್ಕೆ ಮೋದಿ ಅನಿವಾರ್ಯವಾಗಿದ್ದಾರೆ ಎಂದರು.

ಪ್ರಭಾರಿ ರವಿಶಂಕರ್ ಮಿಜಾರ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಜಿಲ್ಲಾ ಕಾರ್ಯದರ್ಶಿ  ನಮಿತಾ ಶ್ಯಾಮ್ , ಸುಗುಣಾ ಕಿಣಿ, ಕ್ಷೇತ್ರ  ಪ್ರಧಾನ ಕಾರ್ಯದರ್ಶಿ ಗಳಾದ ರಾಮದಾಸ್ ಬಂಟ್ವಾಳ್, ಮೋನಪ್ಪ ದೇವಸ್ಯ, ದೇವಪ್ಪ ಪೂಜಾರಿ, ಜಿಪಂ ಸದಸ್ಯ ತುಂಗಪ್ಪ ಬಂಗೇರ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.

ಸಭೆಯಲ್ಲಿ ಮೇರಾ ಪರಿವಾರ್ ಬಿಜೆಪಿ ಪರಿವಾರ್, ಪ್ರಧಾನಿ ಮೋದಿಯವರ ಮನ್ ಕೀ ಬಾತ್, ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮ , ಮೇರಾ ಬೂತ್ ಸಭ್ ಸೆ ಮಜ್ ಬೂತ್, ಕಮಲ ಸಂದೇಶ ಯಾತ್ರೆ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವ ಬಗ್ಗೆ ಚರ್ಚಿಸಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

17 hours ago