Categories: ಬಂಟ್ವಾಳ

ಬಂಟ್ವಾಳ ತಾಲೂಕಿನಾದ್ಯಂತ ಮತದಾರರ ವಿಶೇಷ ನೋಂದಣಿ ಅಭಿಯಾನ

ಮತದಾರರ ಪಟ್ಟಿಗೆ ಹೆಸರು ನೋಂದಾಯಿಸದ, ವರ್ಗಾಯಿಸಲು ಬಾಕಿ ಇರುವ ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕದವರ ಅನುಕೂಲಕ್ಕಾಗಿ ಬಂಟ್ವಾಳ ತಾಲೂಕಿನಾದ್ಯಂತ ಫೆ 23, 24 ಹಾಗೂ ಮಾರ್ಚ್ 2, 3 ರಂದು ಎಲ್ಲಾ ಮತಗಟ್ಟೆಗಳಲ್ಲಿ ಮಿಂಚಿನ ಮತದಾರರ ನೋಂದಣಿ ಅಭಿಯಾನ.

www.bantwalnews.com Editor: Harish Mambady

ಜಾಹೀರಾತು

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದೆ ಇರುವ ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಕುರಿತು ಫೆ.23, ಶನಿವಾರ, ಫೆ.24 ಭಾನುವಾರ ಮತ್ತು ಮಾ.2 ಶನಿವಾರ ಹಾಗೂ ಮಾ.3 ಭಾನುವಾರ ಮತದಾರರ ವಿಶೇಷ ನೋಂದಣಿ ಅಭಿಯಾನ ನಡೆಯಲಿದೆ. ಬಂಟ್ವಾಳ ತಾಲೂಕಿನ ಎಲ್ಲ ಮತಗಟ್ಟೆ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮ ಇರುತ್ತದೆ ಎಂದು ತಹಶೀಲ್ದಾರ್ ರಶ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತದಾರರ ಪಟ್ಟಿಗೆ ವಿಕಲಚೇತನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನುಕೂಲಕ್ಕಾಗಿ ಈ ಅಭಿಯಾನ ಇರಲಿದೆ. ವಯಸ್ಸಿನ ಕುರಿತ ದಾಖಲೆಗಳು, ವಾಸಸ್ತಳದ ದಾಖಲೆಗಳು, ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಬರುವಾಗ ತರಬೇಕು. ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ಈ ಅಭಿಯಾನ ನಡೆಯುವುದು.

ವಯಸ್ಸಿನ ಕುರಿತು ಶಾಲಾ ಪ್ರಮಾಣಪತ್ರ, ಜನನ ಪ್ರಮಾಣಪತ್ರ, ಆಧಾರ್ ಕಾರ್ಡು, ಪಾಸ್ ಪೋರ್ಟ್, ಎಸ್.ಎಸ್.ಎಲ್.ಸಿ. ಪಿಯುಸಿ ಅಂಕಪಟ್ಟಿಗಳು, ಪಾನ್ ಕಾರ್ಡ್, ಹಾಗೂ ವೈದ್ಯಕೀಯ ಪ್ರಮಾಣಪತ್ರ ಬೇಕು. ವಾಸಸ್ಥಳದ ಕುರಿತು ಪಡಿತರ ಚೀಟಿ, ಆಧಾರ್ ಕಾರ್ಡು, ಗ್ಯಾಸ್ ಸಿಲಿಂಡರ್ ಸ್ವೀಕೃತಿ ರಶೀದಿ, ವಿದ್ಯುತ್ ಬಿಲ್ ಪಾವತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಬಾಡಿಗೆ ಕರಾರು ಪತ್ರ ಹಾಗೂ ಇನ್ನಿತರ ದಾಖಲೆಗಳು ಅಗತ್ಯ ಎಂದು ಪ್ರಕಟಣೆರ ತಿಳಿಸಿದೆ.

18 ವರ್ಷ ಪೂರೈಸಿದ ಹೊಸ ಮತದಾರರು ಹಾಗೂ ಒಂದು ಕ್ಷೇತ್ರದಿಂದ ಮತ್ತೊಂದೆಡೆ ವಾಸಸ್ಥಳ ಬದಲಾಯಿಸಿದವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು, ಅನಿವಾಸಿ ಭಾರತೀಯರು ಸೇರ್ಪಡೆ ಮಾಡಲು, ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು, ಹೆಸರು, ತಂದೆ ಹೆಸರು, ಮನೆ ವಿಳಾಸ, ವಯಸ್ಸು, ಭಾವಚಿತ್ರಕ್ಕೆ ಸಂಬಂಧಿಸಿ ದೋಷಗಳಿದ್ದರೆ ಸರಿಪಡಿಸಲು, ಒಂದೇ ವಿಧಾನಸಭೆ ಕ್ಷೇತ್ರದೊಳಗೆ ವಾಸಸ್ಥಳ ಬದಲಾಯಿಸಿದರೆ ವಿವಿಧ ನಮೂನೆಯ ಅರ್ಜಿಗಳನ್ನು ಭರ್ತಿ ಮಾಡಿ ಕೊಡಬಹುದು.

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts