ಬಂಟ್ವಾಳ: ಮನಸ್ಸನ್ನು ಕುಣಿಸುವ ಮತ್ತು ಕೆರಳಿಸುವ ಇಂದಿನ ಲೌಕಿಕ ಬದುಕಿನ ಸಂದರ್ಭ ಭಾಗವತದಂಥ ಅಧ್ಯಾತ್ಮ ಸಂಬಂಧಿ ಪ್ರವಚನಗಳ ಮೂಲಕ ಮನಸ್ಸನ್ನು ತಣಿಸುವಂತಹ ಕೆಲಸ ಮಾಡುತ್ತಿರುವುದು ಅತ್ಯಂತ ಆಶಾದಾಯಕ ವಿಚಾರ ಎಂದು ಮಂಚಿ ಗೋಪಾಲಕೃಷ್ಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಹೇಳಿದರು.
ಮಂಚಿ ಗೋಪಾಲಕೃಷ್ಣ ದೇವಾಲಯದಲ್ಲಿ ನಡೆಯುತ್ತಿರುವ ಭಾಗವತ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಶುಭ ಹಾರೈಸಿದರು. ದ.ಕ ಧಾರ್ಮಿಕ ಪರಿಷತ್ತಿನ ಸದಸ್ಯ ಜಗನ್ನಾಥ ಚೌಟ ಉದ್ಘಾಟಿಸಿ ಭಾಗವತ ರಚನೆಯ ಹಿನ್ನೆಲೆಯನ್ನು ವಿವರಿಸಿದರು. ನಿವೃತ್ತ ಪ್ರಾಂಶುಪಾಲ ವೇದವ್ಯಾಸ ರಾಮಕುಂಜ ಅಧ್ಯಕ್ಷತೆ ವಹಿಸಿದ್ದರು. ಪ್ರವಚನಕಾರ ರಾಮಕುಂಜ ಕೃಷ್ಣಪ್ರಸಾದ ಭಟ್ ಉಪಸ್ಥಿತರಿದ್ದರು. ತಿರುಮಲೇಶ ಭಟ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…