ಕೊಂಪದವು: ಜೀವನ ಕೌಶಲ್ಯ ತರಬೇತಿ

ಬಂಟ್ವಾಳ: ಪ್ರಜ್ಞಾ ಸಲಹಾ ಕೇಂದ್ರ ಮಂಗಳೂರು ಆಶ್ರಯದಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳಾ ಸಬಲೀಕರಣ ಯೋಜನೆಯಡಿ ಸ್ವಸಹಾಯ ಸಂಘಗಳ ಸದಸ್ಯರಿಗೆ ಜೀವನ ಕೌಶಲ್ಯ ತರಬೇತಿ ಕಾರ್ಯಗಾರ  ಕೊಂಪದವು ಸಮುದಾಯ ಭವನದಲ್ಲಿ ನಡೆಯಿತು.

ಜಾಹೀರಾತು

ಪತ್ರಕರ್ತ ಗೋಪಾಲ ಅಂಚನ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಪ್ರತಿಯೊರ್ವರಲ್ಲೂ ತನ್ನದೇ ಆದ ಪ್ರತಿಭೆ, ಕೌಶಲ್ಯಗಳಿದೆ. ಅದನ್ನು ಗುರುತಿಸಿಕೊಂಡು ವೃದ್ಧಿಪಡಿಸುತ್ತಾ ಜೀವನದ ಹಾದಿಯಲ್ಲಿ ಎದುರಾಗುವ ಸಮಸ್ಯೆ, ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ತಮ್ಮ ಜೀವನವನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದರು.

ಯೋಜನಾ ಸಂಯೋಜಕ ವಿಲಿಯಂ ಸಾಮ್ಯುವೆಲ್ ಪ್ರಾಸ್ತಾವಿಕ ಮಾತುಗಳನ್ನಾಡಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಸಂಸ್ಥೆಯು ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ವಲಯ ಸಂಯೋಜಕ ಪ್ರದೀಪ್ ಕಾಮತ್, ಮೇಲ್ವಿಚಾರಕಿ ರೇಷ್ಮಾ, ಸಿಬ್ಬಂದಿಗಳಾದ ಮಾವಿಸ್ ಡಿಸೋಜ, ನಿರ್ಮಲ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೊಂಪದವು: ಜೀವನ ಕೌಶಲ್ಯ ತರಬೇತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*