ಬಂಟ್ವಾಳ: ಪ್ರಜ್ಞಾ ಸಲಹಾ ಕೇಂದ್ರ ಮಂಗಳೂರು ಆಶ್ರಯದಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳಾ ಸಬಲೀಕರಣ ಯೋಜನೆಯಡಿ ಸ್ವಸಹಾಯ ಸಂಘಗಳ ಸದಸ್ಯರಿಗೆ ಜೀವನ ಕೌಶಲ್ಯ ತರಬೇತಿ ಕಾರ್ಯಗಾರ ಕೊಂಪದವು ಸಮುದಾಯ ಭವನದಲ್ಲಿ ನಡೆಯಿತು.
ಪತ್ರಕರ್ತ ಗೋಪಾಲ ಅಂಚನ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಪ್ರತಿಯೊರ್ವರಲ್ಲೂ ತನ್ನದೇ ಆದ ಪ್ರತಿಭೆ, ಕೌಶಲ್ಯಗಳಿದೆ. ಅದನ್ನು ಗುರುತಿಸಿಕೊಂಡು ವೃದ್ಧಿಪಡಿಸುತ್ತಾ ಜೀವನದ ಹಾದಿಯಲ್ಲಿ ಎದುರಾಗುವ ಸಮಸ್ಯೆ, ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ತಮ್ಮ ಜೀವನವನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದರು.
ಯೋಜನಾ ಸಂಯೋಜಕ ವಿಲಿಯಂ ಸಾಮ್ಯುವೆಲ್ ಪ್ರಾಸ್ತಾವಿಕ ಮಾತುಗಳನ್ನಾಡಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಸಂಸ್ಥೆಯು ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ವಲಯ ಸಂಯೋಜಕ ಪ್ರದೀಪ್ ಕಾಮತ್, ಮೇಲ್ವಿಚಾರಕಿ ರೇಷ್ಮಾ, ಸಿಬ್ಬಂದಿಗಳಾದ ಮಾವಿಸ್ ಡಿಸೋಜ, ನಿರ್ಮಲ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.