ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಟ್ಲ ಬೂತ್ ಮಟ್ಟದ ಅಧಿಕಾರಿಗಳಿಗೆ ತಹಶೀಲ್ದಾರ್ ರಶ್ಮಿ ತರಬೇತಿ ನೀಡಿದರು. ವಿಟ್ಲ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ತರಬೇತಿಯಲ್ಲಿ ಮತದಾರರ ಪಟ್ಟಿಗೆ ಮಿಂಚಿನ ನೋಂದಾವಣೆ, ಮತದಾರ ಪಟ್ಟಿ ಪರಿಶೀಲನೆ, ಮತದಾನ ಕೇಂದ್ರದ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು. ಮತದಾರ ದೂರವಾಣಿ ಸಂಖ್ಯೆ ದಾಖಲಿಸುವ, ಮತಗಟ್ಟೆಗಳ ಬಗ್ಗೆ ಮೂಲ ಸೌಕರ್ಯಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದರು. ವಿಟ್ಲ ಕಂದಾಯ ನಿರೀಕ್ಷಕ ದಿವಾಕರ್ ಹಾಗೂ ವಿವಿಧ ಗ್ರಾಮಗಳ ಗ್ರಾಮ ಕರಣಿಕರು ಭಾಗವಹಿಸಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…