Categories: ವಿಟ್ಲ

ಕುಳಾಲು: 81 ಲಕ್ಷ ರೂ ಅನುದಾನದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಳಾಲು ಭಾಗದಲ್ಲಿ 81 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಜಿ ಸಚಿವ ಬಿ ರಮಾನಾಥ ರೈ ಉದ್ಘಾಟಿಸಿದರು.

ಜಾಹೀರಾತು

ಕುಳಾಲು ವಾರಾಹಿ ಸಭಾ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಳೆದ ಬಾರಿ ನಾನು ಶಾಸಕನಾಗಿದ್ದ ವೇಳೆ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ಇಂದು ನನ್ನನ್ನು ಉದ್ಘಾಟನೆಗೆ ಆಹ್ವಾನಿಸುತ್ತಿದ್ದಾರೆ. ಕುಳಾಲುಬೊಳ್ಪಾದೆಕನ್ಯಾನ ಸಂಪರ್ಕ ರಸ್ತೆ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗಿದ್ದು, ಉದ್ಘಾಟನೆಗೆ ಸಿದ್ಧಗೊಳ್ಳುತ್ತಿದೆ. ಕೆಲವು ರಸ್ತೆಗಳಿಗೆ ಕಾನೂನು ತೊಡಕು ಇದ್ದರೂ ಮಾನವೀಯತೆ ದೃಷ್ಟಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದರು.

ಕುಳಾಲುಕುಂಟ್ರಕಳ ಪರಿಶಿಷ್ಟ ಪಂಗಡ ಕಾಲೋನಿ ರಸ್ತೆ, ಮಡ್ಯಲಮಾರ್ ರಸ್ತೆ, ಕುದ್ರಿಯಾಪಾದೆಕರಿಯ ರಸ್ತೆ, ಮುಂಡಾಜೆಕದುಮಜೆಕೋಡಿ ರಸ್ತೆಯನ್ನು ಉದ್ಘಾಟಿಸಲಾಯಿತು. ಬದಿಯಡ್ಕಕಾನ ಪರಿಶಿಷ್ಟ ಪಂಗಡ ಕಾಲೋನಿ ರಸ್ತೆ, ಬೊಳ್ಪಾದೆಕೊಡಂಗೆ ರಸ್ತೆಗೆ ಇದೇ ಸಂದರ್ಭ ಶಿಲಾನ್ಯಾಸ ನಡೆಸಿದರು. ಪುಲ್ವಾಮದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.

ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯ ಕುಳ್ಯಾರು ನಾರಾಯಣ ರೈ, ಗ್ರಾಮ ಪಂಚಾಯಿತಿ ಸದಸ್ಯರಾದ ಗುರುವಪ್ಪ ಮುಗೇರ, ಲೀನಾ ಡಿಸೋಜ, ವೇದವತಿ, ಪುಷ್ಪಲತಾ, ಪವಿತ್ರ ಪೂಂಜ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಸ್ವಾಗತಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್ ವಂದಿಸಿದರು. ಮಂಜುನಾಥ ಶೆಟ್ಟಿ ಪ್ರಾರ್ಥಿಸಿದರು.

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ