Categories: ಕಲ್ಲಡ್ಕ

ಪೂವಳ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಗುದ್ದಲಿಪೂಜೆ

ಜಾಹೀರಾತು

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಅವರ 10 ಲಕ್ಷ ರೂ ಅನುದಾನದಿಂದ ನಿರ್ಮಾಣವಾಗಲಿರುವ ತಾಲೂಕಿನ ಕಲ್ಲಡ್ಕ ಸಮೀಪ ಅಮ್ಟೂರು ಗ್ರಾಮದ ಪೂವಳ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಗುದ್ದಲಿಪೂಜೆ ಸೋಮವಾರ ಬೆಳಗ್ಗೆ ನೆರವೇರಿತು.

ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ಕಾಂಕ್ರೀಟ್ ಕಾಮಗಾರಿಗೆ ಶಾಸಕರು ಅನುದಾನ ಬಿಡುಗಡೆಗೊಳಿಸಿ, ಜನರ ಸಮಸ್ಯೆಗೆ ಪರಿಹಾರ ನೀಡುತ್ತಿದ್ದಾರೆ, ಇದು ಹಲವು ವರ್ಷಗಳ ಬೇಡಿಕೆಯಾಗಿತ್ತು ಎಂದರು.

ತಾಪಂ ಮಾಜಿ ಉಪಾಧ್ಯಕ್ಷ ಮತ್ತು ಬಿಜೆಪಿ ಎಸ್.ಸಿ.ಮೋರ್ಚಾ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು ಈ ಸಂದರ್ಭ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮಸ್ಥರು ರಸ್ತೆ ದುರಸ್ತಿಗೆ ಮನವಿ ನೀಡುತ್ತಾ ಬಂದಿದ್ದು, ಶಾಸಕರು ಇದಕ್ಕೆ ಸ್ಪಂದನೆ ನೀಡಿದ್ದಾರೆ ಎಂದರು.

ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಲಕ್ಷ್ಮೀ ಭಟ್, ತಾಪಂ ಸದಸ್ಯ ಮಹಾಬಲ ಆಳ್ವ, ಗ್ರಾಪಂ ಉಪಾಧ್ಯಕ್ಷ ಮಹಮ್ಮದ್ ಮುಸ್ತಾಫ, ಗ್ರಾಪಂ ಸದಸ್ಯರಾದ ಗೋಪಾಲಕೃಷ್ಣ ಪೂವಳ, ಗೋಪಾಲ ಪೂಜಾರಿ, ರಾಜೇಶ್ ಕೊಟ್ಟಾರಿ, ಮೋನಪ್ಪ ದೇವಸ್ಯ, ಯುವ ಮೋರ್ಚಾ ತಾಲೂಕು ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ಪ್ರಮುಖರಾದ ಜಗದೀಶ ಬಜ್ಜಾರ್, ರಮೇಶ್ ಎನ್, ರೊನಾಲ್ಡ್ ಡಿಸೋಜ, ಸೀತಾರಾಮ ಭಟ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts