ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕ ಸ್ವಾಸ್ಥ್ಯ ಸಾಧ್ಯ. ಕ್ರೀಡಾಪಟುಗಳು ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಉದ್ಯೋಗದ ಮಾರುಕಟ್ಟೆಯಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳಬೇಕು. ಕ್ರೀಡೆಯ ಮೂಲಕ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ಜಾಕೆ ಮಾಧವ ಗೌಡ ಹೇಳಿದರು.
ಮಂಗಳೂರು ವಿ.ವಿ. ಮತ್ತು ವಾಮದಪದವು ಸ.ಪ್ರ.ದ. ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ಮಂಗಳೂರು ವಿ.ವಿ. ಅಂತರ ಕಾಲೇಜು ಮಟ್ಟದ ಪುರುಷರ ಖೋ-ಖೋ ಪಂದ್ಯಾಟವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಕಿಶೋರ್ ಕುಮಾರ್ ಸಿ.ಕೆ. ಮಾತನಾಡಿ, ಕ್ರೀಡಾಕೂಟಗಳನ್ನು ಸಂಘಟಿಸಲು ಸತತ ಪರಿಶ್ರಮ ಅಗತ್ಯ, ವಾಮದಪದವು ಸ.ಪ್ರ.ದ. ಕಾಲೇಜು ಸತತ 6ನೇ ಬಾರಿಗೆ ವಿ.ವಿ. ಮಟ್ಟದ ಪಂದ್ಯಾಟವನ್ನು ಆಯೋಜಿಸಿರುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಒತ್ತಿದ್ದು ಇನ್ನಷ್ಟು ಎತ್ತರದ ಸಾಧನೆ ಮಾಡಲಿ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್ ಬಿ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚೆನೈತ್ತೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯತೀಶ್ ಶೆಟ್ಟಿ ವಿಯನಗರ, ಪಿ.ಡಬ್ಲ್ಯೂ.ಡಿ ಗುತ್ತಿಗೆದಾರ ಅಮ್ಮು ರೈ ಹರ್ಕಾಡಿ, ಶಶಾಂಕ್ ಕ್ಯಾಷ್ಯೂ ಇಂಡಸ್ತ್ರೀಸ್ ಮಾಲಕ ಹರೀಂದ್ರ ಪೈ, ಗುತ್ತಿಗೆದಾರ ಬೋಜರಾಜ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಮೋಹಿನಿ ಮತ್ತು ತಂಡ ಪ್ರಾರ್ಥಿಸಿದರು. ರಾಜ್ಯಶಾಸ್ತ್ರ ವಿಭಗದ ಮುಖ್ಯಸ್ಥ ಪ್ರೊ. ರೋನಾಲ್ಡ್ ಪ್ರವೀಣ್ ಕೊರೆಯ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರವಿ ಎಂ.ಎನ್. ವಂದಿಸಿದರು. ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಕೃಷ್ಣಮೂರ್ತಿ ಎನ್ ಬಿ. ಕಾರ್ಯಕ್ರಮ ನಿರೂಪಿಸಿದರು.