ಬಂಟ್ವಾಳ : ಕರ್ನಾಟಕ ಪತ್ರಕರ್ತರ ಸಂಘ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಕ್ಯಾನ್ಸರ್ ಜಾಗೃತಿ ಮಾಹಿತಿ ಕಾರ್ಯಕ್ರಮವು ಫೆ. 28 ರಂದು ಬೆಳಿಗ್ಗೆ 10.30 ರಿಂದ ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಅಧ್ಯಕ್ಷತೆ ವಹಿಸುವರು. ಎನ್ಪಿಸಿಡಿಸಿಆರ್ ಜಿಲ್ಲಾ ಕಾರ್ಯಕ್ರಮ ಸಂಯೋಜಕಿ ಡಾ. ಸುಷ್ಮಾ ಅಡಪ ಮಾಹಿತಿ ಶಿಬಿರ ನಡೆಸಿಕೊಡುವರು. ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ಫಾರೂಕ್ ಬಂಟ್ವಾಳ ಮತ್ತು ಪ್ರಧಾನ ಕಾರ್ಯದರ್ಶಿ ವಿ.ಟಿ. ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.