Categories: ಬಂಟ್ವಾಳ

ಆಹಾರ ಪದ್ಧತಿ, ಕ್ರಮಗಳ ಕುರಿತು ನಿಗಾ ಇರಲಿ: ಡಾ.ಸುಷ್ಮಾ ಅಡಪ

ಬಂಟ್ವಾಳ: ಇವತ್ತು ಮಕ್ಕಳಿಗೆ ಸರಿಯಾದ ಪೌಷ್ಟಿಕಾಂಶದ ಆಹಾರ ಸಿಗುತ್ತಿಲ್ಲ. ಅವರ ಆಹಾರ ಪದ್ದತಿ ಹಾಗೂ ಕ್ರಮಗಳ ಬಗ್ಗೆ ಪೋಷಕರು ತೀವ್ರ ನಿಗಾ ವಹಿಸಿ ಕ್ಯಾನ್ಸರ್ ರೋಗದಿಂದ ರಕ್ಷಿಸಬೇಕಿದೆ ಎಂದು ಎನ್.ಪಿ.ಸಿ.ಡಿ.ಸಿ.ಎಸ್. ಯೋಜನೆಯ ಜಿಲ್ಲಾ ಕಾರ್ಯಕ್ರಮ ಸಂಯೋಜಕಿ ಡಾ. ಸುಷ್ಮಾ ಅಡಪ ತಿಳಿಸಿದರು.

ಕರ್ನಾಟಕ ಪತ್ರಕರ್ತರ ಸಂಘದ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಬಿ.ಸಿ.ರೋಡಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ನಡೆದ ಕ್ಯಾನ್ಸರ್ ಜಾಗೃತಿ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾಹಿತಿ ನೀಡಿದರು. ಕ್ಯಾನ್ಸರ್ ರೋಗದ ಲಕ್ಷಣಗಳು, ರೋಗವನ್ನು ಪತ್ತೆ ಹಚ್ಚುವ ವಿಧಾನ ಹಾಗೂ ತಡೆಗಟ್ಟುವ ಮುಂಜಾಗೃತಾ ಕ್ರಮಗಳನ್ನು ವಿವರಿಸಿ, ಶಿಕ್ಷಕರೊಂದಿಗೆ ಮುಕ್ತ ಸಂವಾದ ನಡೆಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಪತ್ರಕರ್ತರ ಸಂಘದ ದ.ಕ. ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್, ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಶಿಕ್ಷಕರ ಸಮೂಹದಿಂದ ಆಗಬೇಕು ಎಂದು ಹೇಳಿದರು.

ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ಇಂದು ಎಲ್ಲ ರೀತಿಯ ಚಿಕಿತ್ಸೆಗಳಿದ್ದು, ಸೂಕ್ತ ವ್ಯವಸ್ಥೆಗಳನ್ನು ಸರಕಾರ ಕೂಡಾ ಮಾಡುತ್ತಿದೆ. ಇದನ್ನು ಪ್ರತಿಯೊಬ್ಬರೂ ಉಪಯೋಗಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಬದ್ದರಾಗಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶಿವಪ್ರಕಾಶ್ ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರ ವೈದ್ಯಕೀಯ ಸೌಲಭ್ಯಗಳನ್ನು ವಿವರಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಮಂಜುನಾಥ ಆಚಾರ್ಯ, ಪದವಿಪೂರ್ವ ಕಾಲೇಜು ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಅವರು ಮಾತನಾಡಿದರು. ಪತ್ರಕರ್ತರಾದ ಯು. ಮುಸ್ತಫಾ, ಸತೀಶ್ ಕಾರ್ತಿಕ್, ಲತೀಫ್ ನೇರಳಕಟ್ಟೆ. ರಹಿಮಾನ್ ತಲಪಾಡಿ ಮೊದಲಾದವರು ಭಾಗಹಿಸಿದ್ದರು. ಕರ್ನಾಟಕ ಪತ್ರಕರ್ತರ ಸಂಘದ ಬಂಟ್ವಾಳ ತಾಲೂಕು ಸಮಿತಿಯ ಸದಸ್ಯ ಜಯಾನಂದ ಪೆರಾಜೆ ಸ್ವಾಗತಿಸಿ,  ಅಳಿಕೆ ವಿದ್ಯಾ ಸಂಸ್ಥೆಗಳ ಪ್ರಾಂಶುಪಾಲ ರಘು ಟಿ.ವೈ. ವಂದಿಸಿದರು. ಸಂಘದ ಅಧ್ಯಕ್ಷ ಫಾರೂಕ್ ಬಂಟ್ವಾಳ ಪ್ರಸ್ತಾವನೆ ಗೈದರು. ಉಪಾಧ್ಯಕ್ಷ ಪಿ.ಎಂ. ಅಶ್ರಫ್ ಪಾಣೆಮಂಗಳೂರು ಕಾರ್ಯಕ್ರಮ ನಿರೂಪಿಸಿದರು.

  • ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಮೂರನೇ ವರ್ಷದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಂಟ್ವಾಳ ತಾಲೂಕಿನ ಸುದ್ದಿಗಳನ್ನು ಒದಗಿಸುವ ಮೊದಲನೇ ವೆಬ್ ಪತ್ರಿಕೆ

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts